ಸಿಂಪಲ್ಲಾಗಿ ಸಾಯೋದಕ್ಕೆ ಆತ್ಮಹತ್ಯೆ ಮೆಷಿನ್ ಆವಿಷ್ಕರಿಸಿದ ಸ್ವಿಟ್ಜರ್ಲೆಂಡ್‌‌| ನೋವಿಲ್ಲದೆ ಕ್ಷಣದಲ್ಲಿ ಸಾಯಿಸುತ್ತೆ ಈ ಯಂತ್ರ

ಸಮಗ್ರ ಡಿಜಿಟಲ್ ಡೆಸ್ಕ್: ‘ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಿಸುವ ಯಂತ್ರ’ವನ್ನು ಸ್ವಿಟ್ಜರ್ಲೆಂಡ್ ಆವಿಷ್ಕರಿಸಲಾಗಿದ್ದು, ಶೀಘ್ರದಲ್ಲೇ ಇದು ಬಳಕೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

Ad Widget ... ..

ಸ್ವಿಟ್ಜರ್ಲೆಂಡ್‌ ಸರ್ಕಾರ ಆತ್ಮಹತ್ಯೆ ಯಂತ್ರ ಬಳಕೆಗೆ ಕಾನೂನು ಅನುಮೋದನೆ ನೀಡಿದೆ. ಇದೀಗ ವ್ಯಕ್ತಿಯು ಕೇವಲ ಒಂದು ನಿಮಿಷದಲ್ಲಿ ಈ ಯಂತ್ರವನ್ನು ಬಳಸಿ ತನ್ನ ಪ್ರಾಣವನ್ನು ತ್ಯಾಗ ಮಾಡಬಹುದಾಗಿದೆ.

Ad Widget

ಸಾರ್ಕೋ ಎಂಬ ಸಂಸ್ಥೆ ಈ ವಿನೂತನ ಯಂತ್ರವನ್ನು ಆವಿಷ್ಕರಿಸಿದ್ದು, 2019ರಲ್ಲೇ ಈ ಆತ್ಮಹತ್ಯಾ ಸಾಧನೆವನ್ನು ಸಂಸ್ಥೆ ರಿವೀಲ್ ಮಾಡಿತ್ತು. ಆದರೆ ಇದೀಗ ಅತ್ಯಾಧುನಿಕ ಅಪ್ ಡೇಟ್ ನೊಂದಿಗೆ ಈ ಯಂತ್ರ ಬಳಕೆಗೆ ಸಿದ್ಧವಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಈ ಯಂತ್ರವನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡವರು ಯಾವುದೇ ನೋವು ಅನುಭವಿಸದೇ ಸಾಯುತ್ತಾರೆ. ಈ ಯಂತ್ರವು ಆತ್ಮಹತ್ಯೆಗಾಗಿ ಬರುವ ವ್ಯಕ್ತಿ ಬಟನ್ ಒತ್ತಿದ ಕೂಡಲೇ ಆತನಿಗೆ ಆಕ್ಸಿಜನ್ ಬದಲಿಗೆ ನೈಟ್ರೋಜನ್ ಬಿಡುಗಡೆ ಮಾಡುತ್ತದೆ. ಇದರಿಂದ ವ್ಯಕ್ತಿ ಆಕ್ಸಿಜನ್ ಸಿಗದೇ ಹೈಪೋಕ್ಸಿಯಾದಿಂದ ಕೇವಲ ಒಂದೇ ನಿಮಿಷದಲ್ಲಿ ಪ್ರಾಣಬಿಡುತ್ತಾನೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಈ ಆತ್ಮಹತ್ಯಾ ಪಾಡ್ ಅನ್ನು ಸ್ವಿಟ್ಜರ್ಲೆಂಡ್ ನ “ದಿ ಲಾಸ್ಟ್ ರೆಸಾರ್ಟ್” ಸಂಸ್ಥೆ ಆವಿಷ್ಕರಿಸಿದೆ. ಸ್ವಿಟ್ಜರ್ಲೆಂಡ್ ನಲ್ಲಿ ಆತ್ಮಹತ್ಯೆಗೆ ಕಾನೂನು ಬದ್ಧ ಮಾನ್ಯತೆ ನೀಡಿದೆ. ಹೀಗಾಗಿ ಈ ಸಂಸ್ಥೆ ಸೇವೆಗೆ ಯಾವುದೇ ರೀತಿಯ ಕಾನೂನು ತೊಡಕು ಉಂಟಾಗುವುದಿಲ್ಲ.

Leave a Comment

Your email address will not be published. Required fields are marked *