ಹಾಸನ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಆರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು. ೨೬) ರಜೆ ಘೋಷಣೆ ಮಾಡಲಾಗಿದೆ.
ಜು.26ರಂದು ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಿಗೆ ರಜೆ ಘೋಷಿಸಿ ಡಿಡಿಪಿಐ ಹೆಚ್.ಕೆ.ಪಾಂಡು ಆದೇಶ ಹೊರಡಿಸಿದ್ದಾರೆ.
ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಏರಿಕೆಯಾಗುತ್ತಿದೆ. ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಆರು ಕ್ರಸ್ಟ್ ಗೇಟ್‌ಗಳ ಮೂಲಕ 65 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಹೇಮಾವತಿ ನದಿಯ ತಗ್ಗು ಪ್ರದೇಶದ ಮತ್ತು ನದಿಯ ಎರಡು ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳವಂತೆ ಹೇಮಾವತಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರಿಂದ ಎಚ್ಚರಿಕೆ ನೀಡಲಾಗಿದೆ.