Ad Widget .

18ನೇ ಇಂಡಿಯನ್ ಪ್ರೀಮಿಯರ್ ಲೀಗ್‌/ ವಿಶೇಷ ಮನವಿ ಮಾಡಿದ ಫ್ರಾಂಚೈಸಿಗಳು

ಸಮಗ್ರ ನ್ಯೂಸ್‌: ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಗಾಗಿ ಈ ಬಾರಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಎಲ್ಲಾ ತಂಡಗಳಿಗೂ ರಿಟೇನ್ ಆಟಗಾರರನ್ನು ಬಿಟ್ಟು ಉಳಿದ ಆಟಗಾರರನ್ನು ಬಿಡುಗಡೆಗೊಳಿಸುವಂತೆ ಸೂಚನೆ ನೀಡಲಾಗಿದೆ. ಈ ಬೆನ್ನಲ್ಲೇ ಐಪಿಎಲ್ ಫ್ರಾಂಚೈಸಿಗಳು ವಿಶೇಷ ಬೇಡಿಕೆಯನ್ನಿರಿಸಿವೆ.

Ad Widget . Ad Widget .

ಸದ್ಯ ಮೆಗಾ ಹರಾಜಿಗೂ ಮುನ್ನ ಕನಿಷ್ಠ 3 ರಿಂದ 5 ಆಟಗಾರರನ್ನು ಮಾತ್ರ ರಿಟೇನ್ ಮಾಡಿಕೊಳ್ಳಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ 8 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಅನುಮತಿ ನೀಡುವಂತೆ ಫ್ರಾಂಚೈಸಿಗಳು ಮನವಿ ಮಾಡಿವೆ. ಅಲ್ಲದೇ ಹರಾಜಿಗೆ 100 ಕೋಟಿ ರೂ.ಗಳಿಗೆ ನಿಗದಿ ಮಾಡಿರುವ ಪರ್ಸ್ ಮೊತ್ತವನ್ನು ಹೆಚ್ಚಿಸುವಂತೆ ಮನವಿ ಮಾಡಿವೆ. ಆದ್ದರಿಂದ ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳ ಪರ್ಸ್ ಮೊತ್ತವನ್ನು 130 ರಿಂದ 140 ಕೋಟಿ ರೂ.ಗಳವರೆಗೆ ಹೆಚ್ಚಿಸುವ ಸಾಧ್ಯತೆಗಳಿವೆ ಹೇಳಲಾಗುತ್ತಿದೆ.

Ad Widget . Ad Widget .

ಅಲ್ಲದೇ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ RTM (ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ) ಕಾರ್ಡ್ ಬಳಸುವ ಬಗ್ಗೆಯೂ ಫ್ರಾಂಚೈಸಿಗಳು ಡಿಮ್ಯಾಂಡ್ ಮಾಡಿವೆ. 2018ರ ಮೆಗಾ ಹರಾಜಿನಲ್ಲಿ RTMಗೆ ಅವಕಾಶವಿತ್ತು. ಆದರೆ 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಇದನ್ನು ಕೈಬಿಡಲಾಗಿತ್ತು. ಇದೀಗ ಮತ್ತೆ ಈ ನಿಯಮವನ್ನು ಜಾರಿಗೆ ತರಲು ಫ್ರಾಂಚೈಸಿಗಳು ಒಲುವು ತೋರಿವೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *