ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಇದೀಗ ಜೈಲಿನಲ್ಲಿ ಇದ್ದು ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಜಾಮೀನು ಕೊಡಿಸಲು ಕುಟುಂಬದವರು ಕಷ್ಟಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಈ ನಡುವೆ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ.

ನಿನ್ನೆ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಪ್ತರ ಜೊತೆ ಬಂದು ವಿಜಯಲಕ್ಷ್ಮೀ ಅವರು ದರ್ಶನ ಪಡೆದಿದ್ದಾರೆ. ಬೆಳಗ್ಗೆ ದೇವರ ದರ್ಶನ ಮುಗಿಸಿ ಅವರು ನವ ಚಂಡಿಕಾ ಹೋಮ ಮಾಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ದರ್ಶನ್ ಅವರು ಈ ಕಷ್ಟದ ಪರಿಸ್ಥಿತಿಯಿಂದ ಹೊರಬರಲಿ ಎಂದು ವಿಜಯಲಕ್ಷ್ಮಿ ಅವರು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.