Ad Widget .

ಕೆಆರ್‌ಎಸ್‌ ಭರ್ತಿ/ ಇಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ

ಸಮಗ್ರ ನ್ಯೂಸ್‌: ಎರಡು ವರ್ಷಗಳ ನಂತರ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ.

Ad Widget . Ad Widget .

ಕೊಡಗು ಹಾಗೂ ಹಾಸನದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುವುದರಿಂದ ಹಾರಂಗಿ ಮತ್ತು ಹೇಮಾವತಿ ಜಲಾಶಯಗಳಿಂದ ನದಿಗೆ ನೀರು ಹರಿದು ಬರುತ್ತದೆ. ಇದರಿಂದಾಗಿ ಒಳಹರಿವು ಮತ್ತು ಹೊರಹರಿವು ಪ್ರತಿ ಕ್ಷಣವೂ ಹೆಚ್ಚುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *