ಕರ್ತವ್ಯಕ್ಕೆ ಅಡ್ಡಿ ಆರೋಪ| ಪುನಿತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.

Ad Widget ... ..

ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿದ್ದರು. ಆ ಬಳಿಕ ಅವರನ್ನು ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

Ad Widget

ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೇ ಸೋಮವಾರದಂದು ಜಾಮೀನು ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಜೈಲುಪಾಲಾಗಿದ್ದಾರೆ.

Leave a Comment

Your email address will not be published. Required fields are marked *