Ad Widget .

ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ..

ಸಮಗ್ರ ನ್ಯೂಸ್: ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಇಂದು ನಡೆದಿದೆ.

Ad Widget . Ad Widget .

ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಂದು ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

Ad Widget . Ad Widget .

ಬಟ್ಟೆಯಿಂದ ಒರೆಸಿಕೊಂಡರು ರಕ್ತ ಕಡಿಮೆಯಾಗಲಿಲ್ಲ. ಸುದ್ದಿಗೋಷ್ಠಿ ಅರ್ಧಕ್ಕೆ ನಿಲ್ಲಿಸಿ ತಕ್ಷಣ ಅವರನ್ನು ನಿಖಿಲ್ ಕುಮಾರಸ್ವಾಮಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Comment

Your email address will not be published. Required fields are marked *