Ad Widget .

ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್: ಎಲ್ಲೆಡೆ ವೈರಲ್

ಸಮಗ್ರ ನ್ಯೂಸ್: ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟಿರುವ ಸುದ್ದಿ ಇದೀಗ ಭಾರೀ ವೈರಲ್ ಆಗುತ್ತಿದೆ. ಮೊನ್ನೇ ಶ್ರಾವಣ ಮಾಸದ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ಗರ್ಭಗುಡಿಯಲ್ಲೇ ಎಲ್ಲರ ಸಮ್ಮುಖದಲ್ಲೇ ಸಂಸದರು, ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು, ಇದೀಗ ಇವರಿಬ್ಬರ ಫೋಟೋ ಭಾರೀ ವೈರಲ್ ಆಗಿದೆ. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿದೆ.

Ad Widget . Ad Widget .

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ನಾಮಪತ್ರದ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚಾಮರಾಜನಗರ ಬಿಜೆಪಿ ಸದಸ್ಯರು ಚುನಾವಣಾ ಅಧಿಕಾರಿಗಳಿಗೆ ದೂರನ್ನೂ ನೀಡಿದ್ದರು. ಸುನೀಲ್‌ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ನೀಡಿದ್ದರು. ಸುನೀಲ್‌ ಬೋಸ್‌ಗೆ ಮದುವೆಯಾಗಿದೆ, ಆದರೆ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ದೂರಿದ್ದರು. ಇದೀಗ ದೇವರ ಮುಂದೆಯೇ ಅದೇ ಮಹಿಳಾ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟಿರುವುದು ಸಂಚಲನ ಮೂಡಿಸಿದೆ.

Ad Widget . Ad Widget .

ʼಇದೀಗ, ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಡೆದದ್ದು ಸುಳ್ಳು ಅಲ್ಲ ತಾನೆ?ʼ ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ʼಮದುವೆ ಆಗಿದ್ದರೆ, ಆಗಿದೆ ಎಂದು ಹೇಳಲಿ. ಇದರಲ್ಲಿ ಅಡಗಿಸಿ ಇಡುವ ಮುಜುಗರದ ಸಂಗತಿ ಏನಿದೆ?ʼ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Leave a Comment

Your email address will not be published. Required fields are marked *