Ad Widget .

ಮೂಡುಬಿದಿರೆ: ಗೀಸರ್ ನಿಂದ ಗ್ಯಾಸ್ ಸೋರಿಕೆ| ಬಾತ್ ರೂಂ ಒಳಗೆ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ರವಿವಾರ ರಾತ್ರಿ ಮೂಡಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.

Ad Widget . Ad Widget .

ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ. ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ. ಶಾರಿಕ್ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

Ad Widget . Ad Widget .

ಸಂಪೂರ್ಣ ಮುಚ್ಚಿದ್ದ ಬಾತ್ ರೂಮ್ ನಲ್ಲಿ ಗ್ಯಾಸ್ ಗೀಸರ್ ಬಳಸಿದ್ದರಿಂದ ವಿಷಾನಿಲ ಬಿಡುಗಡೆ ಆಗಿದೆ. ಇದನ್ನು ಆಕಸ್ಮಿಕವಾಗಿ ಸೇವಿಸಿದ್ದರಿಂದ ಶಾರಿಕ್ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಶಾರಿಕ್ ದ್ವಿತೀಯ ಪಿಯುಸಿ ಮುಗಿಸಿದ್ದು, ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *