ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ (ಜು.30) ಮುಂಜಾನೆ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ತೊಂದರೆಗೀಡಾಗಿರುವ ಪ್ರದೇಶಗಳಿಗೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಕೋಪ ಪರಿಹಾರ ಸ್ಪಂದನೆ ಪಡೆ (ಎನ್ ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್ಡಿಆರ್ಎಫ್ ತಂಡವನ್ನೂ ಕಳುಹಿಸಿಕೊಡಲಾಗುತ್ತಿದೆ ಎಂದು ಕೇರಳ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರ ಹೇಳಿದೆ.
ಪರಿಹಾರ ಕಾರ್ಯಾಚರಣೆಗೆ ನೆರವಾಗುವಂತೆ ಕಣ್ಣೂರು ಡಿಫೆನ್ಸ್ ಸೆಕ್ಯುರಿಟಿ ಕಾಪ್ಸ್ನ ಎರಡು ತಂಡಗಳಿಗೆ ಈಗಾಗಳೇ ಸೂಚನೆ ನೀಡಲಾಗಿದೆ. ಸ್ಥಳೀಯರ ವರದಿಗಳ ಪ್ರಕಾರ ಹಲವು ಮಂದಿ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ಭಾರೀ ಮಳೆಯಾಗುತ್ತಿರುವುದು ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ಕೆಎಸ್ಡಿಎಂಎ ತಿಳಿಸಿದೆ.