ಸಮಗ್ರ ನ್ಯೂಸ್: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಭಯಾನಕ ಭೂ ಕುಸಿತವಾಗಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್ ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿತ್ತು.