ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.31ರಂದು ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ರಣಭೀಕರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ ಶಾಲೆ ಮತ್ತು ಪಿಯುಸಿ ‌ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

Ad Widget ... ..

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಭೂಕುಸಿತ, ಪ್ರವಾಹ ಉಂಟಾಗಿದೆ. ನೇತ್ರಾವತಿ, ಕುಮಾರಧಾರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗುಪ್ರದೇಶಗಳಲ್ಲಿ ನೆರೆ ನೀರು ಆವರಿಸಿದೆ.

Ad Widget

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಪ್ರಾಕೃತಿಕ ವಿಕೋಪ ತಂಡಗಳು ಸನ್ನದ್ದವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

Leave a Comment

Your email address will not be published. Required fields are marked *