Ad Widget .

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ|ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬದುಕಿದ ಜೀವ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದ ಘಟನೆ ನಡೆದಿದೆ.

Ad Widget . Ad Widget .

ಮಂಗಳೂರಿನ ಕೂಳೂರು ಮಾರ್ಗ 13ಎಫ್ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು. ಬಸ್ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು ಕೇವಲ 6 ನಿಮಿಷಗಳಲ್ಲಿ 6 ಕಿಲೋಮೀಟರ್ ದೂರ ಕ್ರಮಿಸಿ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ತಲುಪಿದರು.

Ad Widget . Ad Widget .

ಸಂದರ್ಭವನ್ನು ಅರಿತುಕೊಂಡು ತಕ್ಷಣವೇ ಬಸ್ಸನ್ನು ಆಸ್ಪತ್ರೆಯತ್ತ ಚಲಾಯಿಸಿದ ಕಾರಣ ವಿದ್ಯಾರ್ಥಿನಿಯನ್ನು ರಕ್ಷಿಸಲು ಸಾಧ್ಯವಾಯಿತು. ಇದರಿಂದ ವಿದ್ಯಾರ್ಥಿನಿಯ ಜೀವ ಉಳಿಯಿತು. ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಗೆ ಮತ್ತು ಮಾನವೀಯತೆಗೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Leave a Comment

Your email address will not be published. Required fields are marked *