July 2024

ಕನಕಪುರ: ಮಹಿಳೆಯರು ಸೇರಿದಂತೆ ಏಳು ಜನರ ಮೇಲೆ‌ ಮಾರಕಾಸ್ತ್ರಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿಶೀಟರ್ ಹರ್ಷ ಗ್ಯಾಂಗ್​ನಿಂದ ಕೃತ್ಯ ಆರೋಪ ಮಾಡಲಾಗಿದೆ. ದಾರಿಗೆ ಅಡ್ಡವಾಗಿ ನಿಂತಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆ ಸಂಬಂಧ ಕೆಲವರನ್ನ ವಶಕ್ಕೆ ಪಡೆಯಲಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗಲಾಟೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ […]

ಕನಕಪುರ: ಮಹಿಳೆಯರು ಸೇರಿದಂತೆ ಏಳು ಜನರ ಮೇಲೆ‌ ಮಾರಕಾಸ್ತ್ರಗಳಿಂದ ಹಲ್ಲೆ Read More »

ಶಿರೂರು ಗುಡ್ಡ ಮತ್ತಷ್ಟು ಕುಸಿಯುವ ಭೀತಿ: ಜಿಎಸ್ಐ ವರದಿಯಲ್ಲಿ ಪ್ರಕಟ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಈಗಾಗಲೇ ಭೂಕುಸಿತ ಸಂಭವಿಸಿದು, ಇದೀಗ ಮತ್ತೆ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿಯುವ ಆತಂಕ ಶುರುವಾಗಿದೆ. 2 ದಿನದ ಹಿಂದೆ ಶಿರೂರು ಬಳಿ ಮಣ್ಣು ಪರೀಕ್ಷೆ ನಡೆಸಿದ್ದ ಜಿಎಸ್ಐ (ಜಿಯಾಲಾಜಿಕಲ್ ಸೆರ್ವೆ ಆಪ್ ಇಂಡಿಯ) ತಜ್ಞರು, ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆಗಳಿವೆ ಎಂದು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ವರದಿ ನೀಡಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿದೆ. ಇನ್ನು ನಾಪತ್ತೆಯಾಗಿರುವ ಮೂವರ ಪತ್ತೆಗಾಗಿ

ಶಿರೂರು ಗುಡ್ಡ ಮತ್ತಷ್ಟು ಕುಸಿಯುವ ಭೀತಿ: ಜಿಎಸ್ಐ ವರದಿಯಲ್ಲಿ ಪ್ರಕಟ Read More »

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| 7ನೇ ವೇತನ ಆಯೋಗದ ಶಿಫಾರಸ್ಸು ಅಧಿಕೃತ ಜಾರಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ-

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| 7ನೇ ವೇತನ ಆಯೋಗದ ಶಿಫಾರಸ್ಸು ಅಧಿಕೃತ ಜಾರಿ Read More »

ಸುಳ್ಯ: ಚಾಂದಿನಿಯ ಚಿಕಿತ್ಸೆಗಾಗಿ‌‌ ಸಿಎಂ ಪರಿಹಾರ ನಿಧಿಯಿಂದ 9 ಲಕ್ಷ ನೆರವು ಬಿಡುಗಡೆ|

ಸಮಗ್ರ ನ್ಯೂಸ್: ‘ಹೈಪರ್‌ ಐಜಿಇ ಸಿಂಡ್ರೋಮ್‌’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ, ಸುಳ್ಯ ತಾಲೂಕಿನ ಸುಳ್ಯ ನಗರದ ನಾವೂರಿನ ಬಡ ಕುಟುಂಬದ ಚಾಂದಿನಿ ಜಿ.ಡಿ. (33) ಎಂಬುವರ ಚಿಕಿತ್ಸೆ ವೆಚ್ಚ ಭರಿಸಲು ಸರ್ಕಾರ ಮತ್ತೆ ₹ 9 ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ₹ 4 ಲಕ್ಷ ಬಿಡುಗಡೆಯಾಗಿತ್ತು. ಉಳಿಕೆ ಮೊತ್ತ ಬಿಡುಗಡೆ ಆಗದ ಕಾರಣ ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆಯವರು ನಿರಾಕರಿಸಿದ್ದರು. ಚಿಕಿತ್ಸೆ ಕೊಡಿಸಲು ಸಾಧ್ಯವಾಗದೇ ಇದ್ದರೆ ದಯಾಮರಣವನ್ನಾದರೂ ನೀಡಿ’ ಎಂದು ಕೋರಿ

ಸುಳ್ಯ: ಚಾಂದಿನಿಯ ಚಿಕಿತ್ಸೆಗಾಗಿ‌‌ ಸಿಎಂ ಪರಿಹಾರ ನಿಧಿಯಿಂದ 9 ಲಕ್ಷ ನೆರವು ಬಿಡುಗಡೆ| Read More »

ಕೇರಳದಲ್ಲಿ ನಿಫಾ ವೈರಸ್ ಆರ್ಭಟ| ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಲಾಕ್ ಡೌನ್ ಹೇರಿಕೆ

ಸಮಗ್ರ ನ್ಯೂಸ್: ದೇವರನಾಡು ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಆರ್ಭಟಿಸುತ್ತಿದೆ. ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದ ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕ ಭಾನುವಾರ ಕೋಝಿಕ್ಕೋಡ್‌ನಲ್ಲಿ ಸಾವನ್ನಪ್ಪಿದ್ದಾನೆ. ಜೊತೆಗೆ ನಿಫಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೇರಳದಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಮಲಪ್ಪುರಂನ ಬಾಲಕನ ಸಾವಿನ ಬೆನ್ನಲ್ಲೇ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯು ಫಾ ಸೋಂಕು ಸಾವಿಗೆ ಕಾರಣ ಅನ್ನೋದನ್ನು ಪತ್ತೆ ಹಚ್ಚಿದೆ. ನಿಫಾ ಸೋಂಕಿನಿಂದ ಸಾವನ್ನಪ್ಪಿರುವ ಬಾಲಕನ ಅಂತ್ಯಕ್ರಿಯೆಯನ್ನು ಸರಕಾರದ ಮಾರ್ಗಸೂಚಿಯಂತೆಯೇ ನಡೆಸಲಾಗಿದೆ. ಬಾಲಕ

ಕೇರಳದಲ್ಲಿ ನಿಫಾ ವೈರಸ್ ಆರ್ಭಟ| ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಲಾಕ್ ಡೌನ್ ಹೇರಿಕೆ Read More »

ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವ/ ಲಡಾಖ್‌ನಲ್ಲಿ ಸಂಭ್ರಮಾಚರಣೆ ಮಾಡಲಿರುವ ಮೋದಿ

ಸಮಗ್ರ ನ್ಯೂಸ್‌: ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜುಲೈ 26ರಂದು ಲಡಾಖ್‌ನ ದ್ರಾಸ್‌ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಲಡಾಖ್‌ನ ಲೆಫ್ಟಿನೆಂಟ್‌ ಜನರಲ್‌ ಮಿಶ್ರಾ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 2022ರಲ್ಲಿ ಪ್ರಧಾನಿ ಮೋದಿ ಅವರು ಕಾರ್ಗಿಲ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು ಮತ್ತು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸಿದ್ದರು.

ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವ/ ಲಡಾಖ್‌ನಲ್ಲಿ ಸಂಭ್ರಮಾಚರಣೆ ಮಾಡಲಿರುವ ಮೋದಿ Read More »

ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗಿ/ ಸರ್ಕಾರಿ ಅಧಿಕಾರಿಗಳಿಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಿದ ಮೋದಿ ಸರ್ಕಾರ

ಸಮಗ್ರ ನ್ಯೂಸ್‌: ಸರ್ಕಾರಿ ಅಧಿಕಾರಿಗಳು ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಮೋದಿ ಸರ್ಕಾರ ತೆಗೆದುಹಾಕಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. 58 ವರ್ಷಗಳ ಹಿಂದೆ ನೀಡಲಾದ ಸಾಂವಿಧಾನಿಕ ನಿರ್ದೇಶನವನ್ನು ಮೋದಿ ಸರ್ಕಾರವು ಹಿಂಪಡೆದಿದೆ ಎಂದು ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹೇಳಿಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು

ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗಿ/ ಸರ್ಕಾರಿ ಅಧಿಕಾರಿಗಳಿಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಿದ ಮೋದಿ ಸರ್ಕಾರ Read More »

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ| ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಸೋಮವಾರ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಎರಡು ಪ್ರಕರಣಗಳು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ| ಸೂರಜ್ ರೇವಣ್ಣಗೆ ಜಾಮೀನು ಮಂಜೂರು Read More »

ಮಾಜಿ ಸಚಿವ ಬಿ.ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ (ED) ಕಸ್ಟಡಿ ಇಂದು ಅಂತ್ಯವಾಗಿದು, ಮಾಜಿ ಸಚಿವ ಬಿ. ನಾಗೇಂದ್ರಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3ರವರೆಗೆ ಅಂದರೇ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ವಾಲ್ಮೀಕಿ ಹಗರಣದಲ್ಲಿ

ಮಾಜಿ ಸಚಿವ ಬಿ.ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ Read More »

ಪತ್ರಕರ್ತ ಶಶಿಧರ್ ಭಟ್ ಚಿಕಿತ್ಸೆಗೆ ಸರ್ಕಾರದ ನೆರವು – ಸಿಎಂ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಪತ್ರಕರ್ತ ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ

ಪತ್ರಕರ್ತ ಶಶಿಧರ್ ಭಟ್ ಚಿಕಿತ್ಸೆಗೆ ಸರ್ಕಾರದ ನೆರವು – ಸಿಎಂ Read More »