July 2024

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಜು.20ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರುಮಳೆ ಭರ್ಜರಿಯಾಗಿ ಸುರಿಯುತ್ತಿದ್ದು ಹಲವೆಡೆ ಅನಾಹುತಗಳು ಸೃಷ್ಟಿಯಾಗುತ್ತಿವೆ. ಘಟ್ಟಪ್ರದೇಶ ಹಾಗೂ ಕರಾವಳಿಯಲ್ಲಿ ಭಾರೀ ಮಳೆ ಮುಂದುವರೆದಿದೆ. ಮಳೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ‌.ಪಾಂಡು ಆದೇಶಿಸಿದ್ದಾರೆ. ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಅವರು ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಜು.20ರಂದು ರಜೆ ಘೋಷಣೆ Read More »

ಭಾರೀ ಮಳೆ‌ ಹಿನ್ನಲೆ| ಜು. 20ರಂದು ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.20ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ‌ ಹಿನ್ನಲೆ| ಜು. 20ರಂದು ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಸುಳ್ಯ: ಕಳಪೆ ಗುಣಮಟ್ಟದ ಕಾಮಗಾರಿಯಿಂದ ಕುಸಿದ ಮೋರಿ

ಸಮಗ್ರ ನ್ಯೂಸ್: ಈ ಬಾರಿಯ ಮಳೆಗೆ ಕೆಮನಬಳ್ಳಿಯ ಹೊಸ ಮೋರಿ ಕುಸಿದು ಹೋಗಿದ್ದು, ಒಂದೂವರೆ ವರ್ಷದ ಹಿಂದೆ ಈ ಮೋರಿಯನ್ನು ಕಳಪೆ ಗುಣಮಟ್ಟದ ಕಾಮಗಾರಿಯಾಗಿ ಮಾಡಿದ್ದು ಇದೀಗ ರಸ್ತೆಯನ್ನು ನಂಬಿದಂತಹ ಐದು ಮನೆಗಳಿಗೆ ಸಂಕಷ್ಟ ಎದುರಾಗಿದೆ. ಯಾವುದೇ ರೀತಿಯ ವಾಹನದಲ್ಲಿ ಸಂಚಾರ ಮಾಡಲು ಜೀವ ಕೈಯಲ್ಲಿಟ್ಟುಕೊಂಡು ಹೋಗುವಂತಾಗಿದೆ. ಅದೇ ರಸ್ತೆಯ ಇನ್ನೊಂದು ಭಾಗದಲ್ಲಿರುವ ದೊಡ್ಡ ಕಾಲು ಸೇತುವೆಯ ಅಪಾಯ ಮಟ್ಟದಲ್ಲಿದೆ.ಇದೀಗ ಅದರ ಒಂದು ಬದಿ ಕುಸಿದು ಬಿದ್ದು ಹೋಗಿದೆ. ಈ ಎರಡು ಸೇತುವೆಗಳು ಅಪಾಯದಲ್ಲಿದ್ದು ಇಲ್ಲಿನ ಜನರು

ಸುಳ್ಯ: ಕಳಪೆ ಗುಣಮಟ್ಟದ ಕಾಮಗಾರಿಯಿಂದ ಕುಸಿದ ಮೋರಿ Read More »

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ ಸಮಗ್ರ ನ್ಯೂಸ್‌: ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವ ಹಿನ್ನಲೆಯಲ್ಲಿ ಇನ್ಮುಂದೆ ಶಾಲಾ ಪ್ರವೇಶಕ್ಕೆ ಯಾವುದೇ ರೀತಿಯ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಎಲ್ಲ ಶಾಲೆಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಹೊಸ ವಿದ್ಯಾರ್ಥಿಗಳ ಸೇರ್ಪಡೆಗೆ ವರ್ಗಾವಣೆ ಪ್ರಮಾಣ ಪತ್ರ ತರಲು ಒತ್ತಾಯಿಸದಂತೆ ಸೂಚಿಸಿದೆ. ತಮಿಳುನಾಡಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಅಶ್ಲೀಲ ಮೆಸೇಜ್ ಗಳ‌ ಡಾಟಾ ಸಂಗ್ರಹಿಸಿದ ತನಿಖಾ ತಂಡ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, ಇದೀಗ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ತನ್ನ ಮೊಬೈಲ್ ನಿಂದ ಕಳುಹಿಸಿದ್ದಂತ ಅಶ್ಲೀಲ ಮೆಸೇಜ್ ಗಳ ಡೇಟಾವನ್ನು ಸಂಗ್ರಹಿಸಿರುವುದಾಗಿ ತಿಳಿದು ಬಂದಿದೆ. ಮೃತದೇಹ ಪತ್ತೆಯಾದ ನಂತ್ರ, ರೇಣುಕಾಸ್ವಾಮಿ ಕೊಲೆ ಹಿಂದಿನ ಅಸಲಿ ಕಾರಣ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದದ್ದು ಎಂಬುದಾಗಿ ಪೊಲೀಸರಿಗೆ ತಿಳಿದು ಬಂದಿತ್ತು. ಹೀಗಾಗಿ ಆತನ ಮೊಬೈಲ್ ಸಂಖ್ಯೆಯ ಮೂಲಕ ಆತ ಬಳಸುತ್ತಿದ್ದ ಸಾಮಾಜಿಕ ಜಾಲತಾಣಗಳಲ್ಲಿನ ಡೇಟಾ ಮಾಹಿತಿ ಸಂಗ್ರಹಿಸೋದಕ್ಕೆ ಎಸ್‌ಐಟಿ ಪೊಲೀಸರು ಮುಂದಾಗಿದ್ದರು. ರೇಣುಕಾಸ್ವಾಮಿ

ರೇಣುಕಾಸ್ವಾಮಿ ಕೊಲೆ ಪ್ರಕರಣ| ಅಶ್ಲೀಲ ಮೆಸೇಜ್ ಗಳ‌ ಡಾಟಾ ಸಂಗ್ರಹಿಸಿದ ತನಿಖಾ ತಂಡ Read More »

ಮಂಗಳೂರು: ವಿದ್ಯುತ್ ಸ್ಪರ್ಶಿಸಿ‌ ಸಾಯುವ ಸ್ಥಿತಿಯಲ್ಲಿದ್ದ ನಾಯಿಯನ್ನು ರಕ್ಷಿಸಲು ಹೋದ ಯುವತಿ ಸಾವು

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಸುರಿಯುವ ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಅನೇಕ ಸಾವುನೋವುಗಳು ಸಂಭವಿಸಿದೆ. ಇಂದು ಮುಂಜಾನೆಯ ವೇಳೆ ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದ ಕಾಲೇಜಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿ ವಿದ್ಯಾರ್ಥಿನಿ ಅಶ್ವಿನಿ ಶೆಟ್ಟಿ(೨೧) ಎಂದು ತಿಳಿದುಬಂದಿದೆ. ಈಕೆ ಗುರುಪುರ ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿಯಾಗಿದ್ದು,ಮಂಗಳೂರಿನ ಕಾಲೇಜಲ್ಲಿ ಚಾರ್ಟೆಡ್ ಅಕೌಂಟೆಂಟ್ ವಿಧ್ಯಾಭ್ಯಾಸ

ಮಂಗಳೂರು: ವಿದ್ಯುತ್ ಸ್ಪರ್ಶಿಸಿ‌ ಸಾಯುವ ಸ್ಥಿತಿಯಲ್ಲಿದ್ದ ನಾಯಿಯನ್ನು ರಕ್ಷಿಸಲು ಹೋದ ಯುವತಿ ಸಾವು Read More »

ಹಳಿಯ ಮೇಲೆ‌ ಕುಳಿತು ಮದ್ಯ ಸೇವನೆ| ರೈಲು ಹರಿದು ಮೂವರು ಸಾವು

ಸಮಗ್ರ ನ್ಯೂಸ್: ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವೇಳೆ ರೈಲು ಹರಿದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ಮಾರ್ಗದಲ್ಲಿ ಗುರುವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ. ಮೃತರನ್ನು ಗಂಗಾವತಿಯ ಮೌನೇಶ್ (23), ಸುನೀಲ್ ಕುಮಾರ್(23) ಹಾಗೂ ವೆಂಕಟ್ (20) ಎಂದು ಗುರುತಿಸಲಾಗಿದೆ. ಈ ಮೂವರು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲು ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ

ಹಳಿಯ ಮೇಲೆ‌ ಕುಳಿತು ಮದ್ಯ ಸೇವನೆ| ರೈಲು ಹರಿದು ಮೂವರು ಸಾವು Read More »

ಯೋಗಾಸನದಲ್ಲಿ 3ನೇ ವಿಶ್ವ ದಾಖಲೆ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ

ಸಮಗ್ರ ನ್ಯೂಸ್: ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, 01 ನಿಮಿಷದಲ್ಲಿ 29 ಬಾರಿ ಉಪವಿಷ್ಠ ಕೋನಾಸನದಿಂದ ರಾಮದೂತಾನಸನಕ್ಕೆ ಪರಿವರ್ತಿಸುವ ಮೂಲಕ ಅಂತಾರಾಷ್ಟ್ರೀಯ ಯೋಗ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ. ಇವರು ವಾಲ್ತಾಜೆ ಪ್ರಶಾಂತ್ ವಾಲ್ತಾಜೆ ಮತ್ತು ಚೈತ್ರರವರ ಪುತ್ರಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರ ದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ. ಪ್ರಸ್ತುತ

ಯೋಗಾಸನದಲ್ಲಿ 3ನೇ ವಿಶ್ವ ದಾಖಲೆ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ Read More »

ಮಾದಕ ವಸ್ತುಗಳ ನಿಗ್ರಹ/ ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್‌: ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಚಾಲನೆ ನೀಡಿದರು. ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಯಾವುದೇ ವ್ಯಕ್ತಿಯು ಮಾದಕ ವಸ್ತುಗಳಿಗೆ ಸಂಬಂಧಿಸಿದ ದೂರು, ಸಲಹೆ ಹಾಗೂ ಮಾಹಿತಿಗಳನ್ನು ಇದರಲ್ಲಿ ಹಂಚಿಕೊಳ್ಳಬಹುದಾಗಿದೆ. ಅಲ್ಲದೇ ಇದಕ್ಕೆ ಕರೆ ಮಾಡಿದವರ ಮಾಹಿತಿಯನ್ನು ಗುಪ್ತವಾಗಿ ಇಡಲಾಗುತ್ತದೆ. ಇದರೊಂದಿಗೆ [email protected] ಇ-ಮೇಲ್‌ ವಿಳಾಸ ಹಾಗೂ ncbmanas.gov.in ವೆಬ್‌ಸೈಟ್‌ಗಳನ್ನು ಉದ್ಘಾಟಿಸಿದರು. ಸಾರ್ವಜನಿಕರು ಇದರಲ್ಲಿ ಯಾವುದಕ್ಕಾದರೂ

ಮಾದಕ ವಸ್ತುಗಳ ನಿಗ್ರಹ/ ಪ್ರತ್ಯೇಕ ಸಹಾಯವಾಣಿ ಆರಂಭಿಸಿದ ಕೇಂದ್ರ ಸರ್ಕಾರ Read More »

ಸುಳ್ಯ: ಕಮರಿಗೆ ಉರುಳಿದ ಕಾರು| ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದವರು ಆಸ್ಪತ್ರೆಗೆ

ಸಮಗ್ರ ನ್ಯೂಸ್: ಎಡೆಬಿಡದೆ ಸುರಿಯುವ ಮಳೆಯ ನಡುವೆ ಸುಳ್ಯ ವ್ಯಾಪ್ತಿಯಲ್ಲಿ ಹಲವೆಡೆ ರಸ್ತೆ ಅಪಘಾತಗಳು ಸುದ್ದಿಯಾಗುತ್ತಿವೆ. ವಿಪರೀತ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಮರಿಗೆ ಪಲ್ಟಿಯಾದ ಘಟನೆ ಸುಳ್ಯದಿಂದ ವರದಿಯಾಗಿದೆ. ಪೆರಾಜೆ ಗ್ರಾಮದ ದಾಸರಹಿತ್ಲುವಿನಲ್ಲಿ ಜು.18ರಂದು ಬೆಳಿಗ್ಗೆ ಈ ಘಟನೆ ಸಂಭವಿಸಿದೆ .ಕಾಸರಗೋಡಿನಿಂದ ಮಡಿಕೇರಿಗೆ ಮದುವೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ಕಾಸರಗೋಡು ಮೂಲದ ಮೂವರು ಪ್ರಯಾಣಿಕರಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಮರಿಗೆ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ

ಸುಳ್ಯ: ಕಮರಿಗೆ ಉರುಳಿದ ಕಾರು| ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದವರು ಆಸ್ಪತ್ರೆಗೆ Read More »