July 2024

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ

ಸಮಗ್ರ ನ್ಯೂಸ್: ಇರಾನ್‌ ನ ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಗಾಜಾ ಗುಂಪಿನ ಹೇಳಿಕೆಯ ಪ್ರಕಾರ, ಅವರ ಸಾವಿಗೆ ಇಸ್ರೇಲ್ ಅನ್ನು ದೂಷಿಸಲಾಗಿದೆ. ಅಕ್ಟೋಬರ್ 7ರ ದಾಳಿಯ ನಂತರ ಇಸ್ಮಾಯಿಲ್ ಹನಿಯೇಹ್ ಅವರನ್ನು ಕೊಂದು ಹಮಾಸ್ ಗುಂಪನ್ನು ನಾಶಮಾಡುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿತ್ತು. ಆದ್ದರಿಂದ ಹತ್ಯೆಯ ಹಿಂದೆ ಇಸ್ರೇಲ್‌ನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಇಸ್ಮಾಯಿಲ್ ಹನಿಯೆಹ್ ಅವರ ಅಂಗ ರಕ್ಷಕ ಕೂಡ ಹತರಾಗಿದ್ದಾರೆ […]

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ Read More »

ವಯನಾಡ್ ಗುಡ್ಡ ಕುಸಿತದಲ್ಲಿ ಸಾವು ಗೆದ್ದ ಕುಟುಂಬ| ಪ್ರಾಣ‌ ರಕ್ಷಿಸಿದ ಹಸು!!

ಸಮಗ್ರ ನ್ಯೂಸ್: ಕೇರಳದ ಭೂ ಕುಸಿತದಲ್ಲಿ ಕ್ಷಣಮಾತ್ರದಲ್ಲಿ ಚಾಮರಾಜನಗರದ ಕುಟುಂಬ ಬಚಾವ್ ಆದ ಘಟನೆ ವೈನಾಡಿನ ಚೂರಲ್ ಮಲೆಯಲ್ಲಿ ನಡೆದಿದೆ‌. ಚೂರಲ್ ಮಲೆಯಲ್ಲಿದ್ದ ಚಾಮರಾಜನಗರದ ವಿನೋದ್, ಜಯಶ್ರೀ, ಸಿದ್ದರಾಜು, ಮಹೇಶ್ ಹಾಗೂ ಗೌರಮ್ಮ ಎಂಬವವರು ಪಾರಾಗಿದ್ದು, ಮೆಪಾಡಿಯಲ್ಲಿದ್ದ ಪ್ರವಿದಾ, ಲಕ್ಷ್ಮಿ, ಪುಟ್ಟಸಿದ್ದಮ್ಮ ಮತ್ತು 2 ತಿಂಗಳ ಮಗು ಚಾಮರಾಜನಗರಕ್ಕೆ ಸುರಕ್ಷಿತವಾಗಿ ಬಂದಿದ್ದಾರೆ. ವಿನೋದ್ ಪತ್ನಿ ಬಾಣಂತಿಯಾದ ಕಾರಣ ಪ್ರವಿದಾ, ಅತ್ತೆ ಲಕ್ಷ್ಮೀ ಹಾಗೂ ಪುಟ್ಟಸಿದ್ದಮ್ಮ ಮೆಪಾಡಿಯಲ್ಲಿದ್ದರು. ವಿನೋದ್ ಮತ್ತು ನಾಲ್ವರು ಚೂರಲ್ ಮಲೆಯಲ್ಲಿದ್ದರು‌. ಚೂರಲ್ ಮಲೆಗೂ ಮೆಪಾಡಿಗೂ

ವಯನಾಡ್ ಗುಡ್ಡ ಕುಸಿತದಲ್ಲಿ ಸಾವು ಗೆದ್ದ ಕುಟುಂಬ| ಪ್ರಾಣ‌ ರಕ್ಷಿಸಿದ ಹಸು!! Read More »

ಕೇರಳದ ವಯನಾಡ್ ಬಳಿಕ ಕರ್ನಾಟಕದ ಪಶ್ಚಿಮ ಘಟ್ಟಗಳಿಗೆ ಕುಸಿತದ ಭೀತಿ!? ಎಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ಯಾಕೆ?

ಸಮಗ್ರ ನ್ಯೂಸ್: ಕೇರಳದಲ್ಲಿ ಭಾರೀ ದುರಂತವಾಗುತ್ತಿದ್ದಂತೆ ಇತ್ತ ಕರ್ನಾಟಕದಲ್ಲೂ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಭಾರೀ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭಾರೀ ದುರಂತ ನಡೆದಿದೆ. ಗುಡ್ಡ ಕುಸಿದಿದ್ದು, ನದಿಯಲ್ಲಿ ಪ್ರವಾಹ ಉಕ್ಕಿ ಹರಿದ ಪರಿಣಾಮ 120 ಕ್ಕೂ ಹೆಚ್ಚಿನ ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ, ಸಾವಿರಾರು ಮಂದಿ ಮನೆ

ಕೇರಳದ ವಯನಾಡ್ ಬಳಿಕ ಕರ್ನಾಟಕದ ಪಶ್ಚಿಮ ಘಟ್ಟಗಳಿಗೆ ಕುಸಿತದ ಭೀತಿ!? ಎಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ಯಾಕೆ? Read More »

ಉಪ್ಪಿನಂಗಡಿ: 5 ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ

ಸಮಗ್ರ ನ್ಯೂಸ್: ಸತತ ಮಳೆಯಿಂದಾಗಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳೆರಡು ಉಕ್ಕಿ ಹರಿದು ಮಂಗಳವಾರ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ನದಿಗಳೆರಡು ಸಂಗಮಿಸಿ ಬಾಗಿನ ಸಮರ್ಪಣ, ಗಂಗಾ ಪೂಜಾ ಹಾಗೂ ಪವಿತ್ರ ಸಂಗಮ ತೀರ್ಥ ಸ್ನಾನ ಜರಗಿತು. 2019ರ ಬಳಿಕ ಇದೇ ಮೊದಲ ಬಾರಿ ಇಲ್ಲಿ ಸಂಗಮ ನೆರವೇರಿದೆ. ಮಂಗಳವಾರ ಮಧ್ಯಾಹ್ನದಿಂದ ಅಪಾಯದ ಮಟ್ಟವನ್ನು ಮೀರಿ ಹರಿದ ನೇತ್ರಾವತಿ ದೇವಾಲಯದ ಮಹಾಕಾಳಿ ಅಮ್ಮನವರ ಗುಡಿಯನ್ನು ಆವರಿಸಿ ಹರಿಯತೊಡಗಿತು. ಆ ಬಳಿಕ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗಕ್ಕೆ ವಿಸ್ತರಿಸಿ

ಉಪ್ಪಿನಂಗಡಿ: 5 ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ Read More »

ವಯನಾಡು ದುರಂತ| 150ರ ಗಡಿ ದಾಟಿದ ಸಾವಿನ‌ ಸಂಖ್ಯೆ

ಸಮಗ್ರ ನ್ಯೂಸ್: ಕೇರಳ‌ ರಾಜ್ಯ ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದ್ದು, ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ನಡುವೆ ಭಾರತ ಹವಾಮಾನ ಇಲಾಖೆ ಬುಧವಾರವೂ ವಯನಾಡು ಸೇರಿದಂತೆ ಉತ್ತರ ಕೇರಳದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ. ʼʼಜುಲೈ 31 ಮತ್ತು ಆಗಸ್ಟ್ 1ರಂದು ವಯನಾಡು ಮತ್ತು ನೆರೆಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ವಯನಾಡು ದುರಂತ| 150ರ ಗಡಿ ದಾಟಿದ ಸಾವಿನ‌ ಸಂಖ್ಯೆ Read More »

ದೇಶದಲ್ಲಿ ‌ಮತ್ತೊಂದು ಮರ್ಯಾದಾ‌ ಹತ್ಯೆ| ಪ್ರೀತಿಸಿ ಮದುವೆಯಾದ ಹುಡುಗ‌ ಒಂದೇ ತಿಂಗಳಲ್ಲಿ ಮಸಣಕ್ಕೆ

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಶಂಭಾಜಿ ನಗರದಲ್ಲಿ ವಾಸವಾಗಿರುವ ವಿದ್ಯಾ, ಪತಿ ಅಮಿತ್ ಸಾಳುಂಕೆ ನಿಧನದಿಂದ ಕಣ್ಣೀರು ಹಾಕುತ್ತಿದ್ದಾಳೆ. ವಿದ್ಯಾ ಕೀರ್ತಿ ಶಾಹಿ ಮತ್ತು ಅಮಿತ್ ಸಾಳುಂಕೆ ಕೆಲವು ಸಮಯದಿಂದ ಲವ್​ ಮಾಡುತ್ತಿದ್ದರು. ಆದರೆ, ಅಮಿತ್​ನನ್ನು ಮದುವೆಯಾಗುವುದಕ್ಕೆ ವಿದ್ಯಾಳ ಪಾಲಕರು ಮತ್ತು ಸಂಬಂಧಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ವಿರೋಧವನ್ನು ಲೆಕ್ಕಿಸದೆ 2024ರ ಮೇ 2ರಂದು ಪುಣೆಗೆ ಹೋಗಿ ದೇವಸ್ಥಾನವೊಂದರಲ್ಲಿ ಇಬ್ಬರು ಮದುವೆಯಾದರು. ಈ ಬಗ್ಗೆ ಮಾತನಾಡಿರುವ ವಿದ್ಯಾ, ಮದುವೆಯಾದ

ದೇಶದಲ್ಲಿ ‌ಮತ್ತೊಂದು ಮರ್ಯಾದಾ‌ ಹತ್ಯೆ| ಪ್ರೀತಿಸಿ ಮದುವೆಯಾದ ಹುಡುಗ‌ ಒಂದೇ ತಿಂಗಳಲ್ಲಿ ಮಸಣಕ್ಕೆ Read More »

ಉಡುಪಿ: ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಉಡುಪಿ, ಕಾಪು,ಕಾರ್ಕಳ, ಹೆಬ್ರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಗಳು ಆದೇಶ ನೀಡಿದ್ದಾರೆ. ಜಿಲ್ಲಾಧಿಕಾರಿ ಆದೇಶ ನೀಡದೇ ಇದ್ದರೂ ಆಯಾ ತಾಲೂಕಿನ ತಹಶೀಲ್ದಾರರಿಗೆ ಶಾಲೆಗೆ ರಜೆ ನೀಡುವ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ನಾಲ್ಕು ತಾಲೂಕುಗಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.

ಉಡುಪಿ: ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.31ರಂದು ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ರಣಭೀಕರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ ಶಾಲೆ ಮತ್ತು ಪಿಯುಸಿ ‌ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಭೂಕುಸಿತ, ಪ್ರವಾಹ ಉಂಟಾಗಿದೆ. ನೇತ್ರಾವತಿ, ಕುಮಾರಧಾರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗುಪ್ರದೇಶಗಳಲ್ಲಿ ನೆರೆ ನೀರು ಆವರಿಸಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಪ್ರಾಕೃತಿಕ ವಿಕೋಪ ತಂಡಗಳು ಸನ್ನದ್ದವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.31ರಂದು ರಜೆ Read More »

ಕೊಡಗಿನಲ್ಲಿ ಮುಂದುವರಿದ ಮಳೆ| ಜು.31 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜು.31ರ ಬುಧವಾರ ಕೊಡಗು ಜಿಲ್ಲೆಯ ಎಲ್ಲ ತಾಲೂಕುಗಳ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲದೇ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಕಾರಣ ಜನರು ಜಾಗರೂಕತೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

ಕೊಡಗಿನಲ್ಲಿ ಮುಂದುವರಿದ ಮಳೆ| ಜು.31 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಭಯಾನಕ ಭೂಕುಸಿತಕ್ಕೆ ತತ್ತರಿಸಿದ ದೇವರನಾಡು| ನದಿಗಳಲ್ಲಿ ತೇಲಿ ಬರುತ್ತಿವೆ ಹೆಣಗಳು| 100ರ ಸನಿಹದಲ್ಲಿ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ಭಯಾನಕ ಭೂಕುಸಿತಕ್ಕೆ ಕೇರಳ ಅಕ್ಷರಶಃ ತತ್ತರಿಸಿ ಹೋಗಿದೆ. ಮಂಗಳವಾರ ಮುಂಜಾನೆ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲಾ ಮತ್ತು ನೂಲ್ಪುಝಾ ಗ್ರಾಮದಲ್ಲಿ ಭೂಕುಸಿತ ಆಗಿದೆ. ಒಟ್ಟು ಮೂರು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಭಾರೀ ಸಾವು ನೋವು ಸಂಭವಿಸಿದೆ. ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶವು ಅಕ್ಷರಶಃ ಗುರುತೇ ಸಿಗದಂತಾಗಿದೆ. ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ಹೆಣಗಳು ತೇಲಿ ಬರುತ್ತಿವೆ. ದೇವರ ನಾಡು ರಕ್ಕಸ ಮಳೆಯಾರ್ಭಟಕ್ಕೆ ಸ್ಮಶಾನವಾಗಿದೆ. ಭೂಕುಸಿತದ ಪರಿಣಾಮ ಮರಗಳು, ಮಣ್ಣು, ಮನೆಗಳನ್ನು ತೊಯ್ದುಬಿಟ್ಟಿವೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯ

ಭಯಾನಕ ಭೂಕುಸಿತಕ್ಕೆ ತತ್ತರಿಸಿದ ದೇವರನಾಡು| ನದಿಗಳಲ್ಲಿ ತೇಲಿ ಬರುತ್ತಿವೆ ಹೆಣಗಳು| 100ರ ಸನಿಹದಲ್ಲಿ ಸಾವಿನ ಸಂಖ್ಯೆ Read More »