July 2024

ದ.ಕ ಜಿಲ್ಲೆಯಲ್ಲಿ ಮಳೆಯ ಕಾರಣಕ್ಕೆ ರಜೆ ಎಂಬ ನಕಲಿ ಸುತ್ತೋಲೆ ಹಂಚಿಕೆ| ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ಜು.18ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಜಿಲ್ಲಾಡಳಿತ ಮಾಡಿಲ್ಲ. ಆದರೆ ಪ್ರತಿದಿನವೂ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡುವುದಕ್ಕಿಂತ ಮುಂಚಿತವಾಗಿ ಸಾಮಾಜಿಕ ಜಾಲಾತಾಣಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಎಂದು ಡಿಸಿ ಅವರ ನಕಲಿ ಆದೇಶ ಪ್ರತಿ ರವಾನೆಯಾಗುತ್ತದೆ. […]

ದ.ಕ ಜಿಲ್ಲೆಯಲ್ಲಿ ಮಳೆಯ ಕಾರಣಕ್ಕೆ ರಜೆ ಎಂಬ ನಕಲಿ ಸುತ್ತೋಲೆ ಹಂಚಿಕೆ| ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ Read More »

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿತ್ತು. ಇದನ್ನು ಜಾರಿಗೆ ತರುವುದಾಗಿಯೂ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಆದ್ರೇ ಇದೀಗ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ವಿಧೇಯಕಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಾಲಗಿದೆ. ಅದರಲ್ಲಿ ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ – ಸಿಎಂ ಸಿದ್ದರಾಮಯ್ಯ Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಇಂದು(ಜು.18) ದ.ಕ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ೫ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ,

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಇಂದು(ಜು.18) ದ.ಕ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನರು ತತ್ತರಿಸಿಹೋಗಿದ್ದಾರೆ. ಭಾರಿ ಮಳೆ ಹಿನ್ನೆಲೆ ಬೃಹತ್ ಗಾತ್ರದ ಮರಗಳು ನೆಲಕ್ಕೆ ಉರುಳುತ್ತಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ಆಲೂರು ತಾಲೂಕಿನ ಶಾಲೆಗಳಿಗೆ ನಾಳೆ(ಜು.18) ರಜೆ ಘೋಷಿಸಲಾಗಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಕಡೆಗಳಲ್ಲಿ ಮಕ್ಕಳು ಹಳ್ಳ ತೊರೆಗಳನ್ನು ದಾಟಿ ಶಾಲೆಗೆ ಬರಬೇಕಾದ ಪರಿಸ್ಥಿತಿ ಇರುತ್ತದೆ. ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಮಾನ್ಯ

ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ ಎರಡು ತಾಲೂಕಿನ ಶಾಲೆಗಳಿಗೆ ರಜೆ Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಜು.18ರಂದು ಉ.ಕ ಜಿಲ್ಲೆಯ ಈ ತಾಲೂಕಿನ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 10 ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯ ಕುಮಟಾ, ಅಂಕೋಲ, ಹಳಿಯಾಳ, ಮುಂಡಗೋಡ, ಹೊನ್ನಾವರ, ಸಿದ್ದಾಪುರ, ಭಟ್ಕಳ, ಜೊಯ್ಡಾ, ಕಾರವಾರ, ಶಿರಸಿ, ಯಲ್ಲಾಪುರದ ಅಂಗನವಾಡಿ, ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ‌ ಶಾಲೆ ಹಾಗೂ ಪಿಯು

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಜು.18ರಂದು ಉ.ಕ ಜಿಲ್ಲೆಯ ಈ ತಾಲೂಕಿನ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಭಾರೀ ಮಳೆ ಹಿನ್ನೆಲೆ| ಕೊಡಗಿನಲ್ಲಿ ಜು.18ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು ಜಿಲ್ಲೆಯ ಎಲ್ಲ ಶಾಲಾ- ಅಂಗನವಾಡಿ- ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಹೊರತುಪಡಿಸಿ) ಗುರುವಾರ (ಜು.18) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಘೋಷಣೆ ಮಾಡಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಕೊಡಗಿನಲ್ಲಿ ಜು.18ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಕರಾವಳಿಗೆ ಜು.18, 19ರಂದು ರೆಡ್ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ನೀರಿನ ಮೂಲಗಳು ತುಂಬಿವೆ. ಜೀವನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಗೆ ಜು.18, 19ರಂದು ರೆಡ್ ಅಲರ್ಟ್ Read More »

ವಾಲ್ಮೀಕಿ ನಿಗಮದಲ್ಲಿ ಅಕ್ರಮ| ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ED ವಶಕ್ಕೆ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದಿದ್ದಾರೆ. ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 10ರಂದು ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಂಗ್ರೆಸ್​ ಶಾಸಕ ಬಸನ್​ಗೌಡ ದದ್ದಲ್​ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ

ವಾಲ್ಮೀಕಿ ನಿಗಮದಲ್ಲಿ ಅಕ್ರಮ| ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿ ED ವಶಕ್ಕೆ Read More »

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ| ಸಿಎಂ ಮೊದಲು ಟ್ವೀಟ್, ಆಮೇಲೆ ಡಿಲಿಟ್| ಮತ್ತೆ ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಮಹತ್ವದ ಮಸೂಧೆ ಒಪ್ಪಿಗೆ ಸೂಚಿಸಲಾಗಿತ್ತು. ಈ ಮಾಹಿತಿ ಹಂಚಿಕೊಂಡು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ ಸಿದ್ಧರಾಮಯ್ಯ, ಆ ಬಳಿಕ ಡಿಲಿಟ್ ಮಾಡಿದ್ದರು. ಈ ಕುರಿತಂತೆ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ| ಸಿಎಂ ಮೊದಲು ಟ್ವೀಟ್, ಆಮೇಲೆ ಡಿಲಿಟ್| ಮತ್ತೆ ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ದ.ಕ ಜಿಲ್ಲೆಯ ಹಲವು ಅಡಿಕೆ ವ್ಯಾಪಾರಿಗಳಿಗೆ ಪಂಗನಾಮ ಹಾಕಿದ್ರಾ ಗುಜರಾತಿ‌ ಸೇಠುಗಳು!?| ಫೋನೂ ಇಲ್ಲ, ಮೆಸೇಜೂ ಇಲ್ಲ ಲಕ್ಷಾಂತರ ಮೊತ್ತ ಖತಂ..!

ಸಮಗ್ರ ನ್ಯೂಸ್: ಕರಾವಳಿಯ ಅಡಿಕೆ ವ್ಯಾಪಾರಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಗುಜರಾತಿ ಸೇಠುಗಳು ಮಾಲಿನೊಂದಿಗೆ ಎಸ್ಕೇಪ್ ಆಗಿರುವ ಕುರಿತಂತೆ ದೂರೊಂದು ದಾಖಲಾಗಿದೆ. ಇದೀಗ ವಂಚನೆಗೆ ಒಳಗಾದ ನಮ್ಮ ಅಡಿಕೆ ವ್ಯಾಪಾರಿಗಳು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಗುಜರಾತ್ ಮೂಲದ ಮೂವರು ಅಡಿಕೆ ವ್ಯಾಪಾರಿಗಳು ವಂಚಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಅದರಲ್ಲೂ ಸುಮಾರು ಮೂವತ್ತು ವರ್ಷಕ್ಕಿಂತಲೂ ಹೆಚ್ಚು ಕಾಲ ಇಲ್ಲಿ ಅಡಿಕೆ ವ್ಯಾಪಾರಿ ಮಾಡುತ್ತಿದ್ದ ಸೇಠು ಒಬ್ಬರು ಕೂಡ ಪರಾರಿಯಾಗಿದ್ದಾಗಿ ಹೇಳಲಾಗಿದೆ. ಹಣ ಕಳೆದುಕೊಂಡ ದ.ಕ ಜಿಲ್ಲೆಯ ಅಡಿಕೆ ವ್ಯಾಪಾರಿಗಳು ತಲೆ

ದ.ಕ ಜಿಲ್ಲೆಯ ಹಲವು ಅಡಿಕೆ ವ್ಯಾಪಾರಿಗಳಿಗೆ ಪಂಗನಾಮ ಹಾಕಿದ್ರಾ ಗುಜರಾತಿ‌ ಸೇಠುಗಳು!?| ಫೋನೂ ಇಲ್ಲ, ಮೆಸೇಜೂ ಇಲ್ಲ ಲಕ್ಷಾಂತರ ಮೊತ್ತ ಖತಂ..! Read More »