July 2024

ವಿಚ್ಚೇದನ ಬಯಸಿ ಬಂದಿದ್ದ 18 ಜೋಡಿಗಳು ಮರಳಿ ಸಾಂಸಾರಿಕ ಜೀವನಕ್ಕೆ| ದಂಪತಿಗಳ ಒಂದಾಗಿಸಿದ ಲೋಕಾ ಅದಾಲತ್

ಸಮಗ್ರ ನ್ಯೂಸ್: ಸಮಾಜದಲ್ಲಿ ವಿಚ್ಛೇದನೆ ಎಂಬುದು ಸರ್ವಸಾಮಾನ್ಯವಾಗಿದೆ. ಹಿಂದಿನ ಕಾಲದ ರೀತಿಯಲ್ಲಿ ನೂರ್ಕಾಲ ಬದುಕುವುದು ಕನಸಿನ ಮಾತಾಗಿದ್ದು, ವಿಚ್ಛೇದನ ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿವೆ. ಇದೀಗ ವಿಚ್ಚೇದನ ಬಯಸಿ ನ್ಯಾಯಾಲಯಕ್ಕೆ ಬಂದಿದ್ದ 18 ದಂಪತಿಗಳು ಲೋಕ ಅದಾಲತ್ ನಲ್ಲಿಕೌಟುಂಬಿಕ ಕಲಹಕ್ಕೆ ತೆರೆಕಂಡ ಘಟನೆ ವರದಿಯಾಗಿದೆ. ತುಮಕೂರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿಈ ಘಟನೆ ನಡೆದಿದ್ದು ಕೌಟುಂಬಿಕ ಕಲಹದಿಂದ ಬೇಸತ್ತು ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದರು. ತುಮಕೂರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದ ದಂಪತಿಗಳು. ಹಲವು ವರ್ಷಗಳಿಂದ ವಿಚ್ಛೇದನಕ್ಕಾಗಿ […]

ವಿಚ್ಚೇದನ ಬಯಸಿ ಬಂದಿದ್ದ 18 ಜೋಡಿಗಳು ಮರಳಿ ಸಾಂಸಾರಿಕ ಜೀವನಕ್ಕೆ| ದಂಪತಿಗಳ ಒಂದಾಗಿಸಿದ ಲೋಕಾ ಅದಾಲತ್ Read More »

ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ಭಾರತದ ಪರಿಹಾರ/ 2.5 ಮಿಲಿಯನ್ ಡಾಲರ್‌ ಪರಿಹಾರ ಧನ ಬಿಡುಗಡೆ

ಸಮಗ್ರ ನ್ಯೂಸ್‌: ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ಭಾರತವು 2.5 ಮಿಲಿಯನ್ ಡಾಲರ್‌ನ ಮೊದಲ ಕಂತನ್ನು ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆಗೆ (UNRWA) ಬಿಡುಗಡೆ ಮಾಡಿದೆ. ನೋಂದಾಯಿತ ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗೆ ನೇರ ಪರಿಹಾರ ಮತ್ತು ಕೆಲಸ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಇದು ಯುಎನ್ ಸದಸ್ಯ ರಾಷ್ಟ್ರಗಳ ಸ್ವಯಂಪ್ರೇರಿತ ಕೊಡುಗೆಯಾಗಿ ಹಣ ನೀಡುತ್ತಿದೆ. UNRWA, 1950 ರಿಂದ ಕಾರ್ಯನಿರ್ವಹಿಸುತ್ತಿದೆ. ಭಾರತದ ಬೆಂಬಲವು ಪ್ಯಾಲೇಸ್ವಿನಿಯನ್ ನಿರಾಶ್ರಿತರಿಗೆ ಒದಗಿಸಲಾದ ಶಿಕ್ಷಣ, ಆರೋಗ್ಯ, ಪರಿಹಾರ ಮತ್ತು ಸಾಮಾಜಿಕ ಸೇವೆಗಳು ಸೇರಿದಂತೆ ಏಜೆನ್ಸಿಯ ಪ್ರಮುಖ ಕಾರ್ಯಕ್ರಮಗಳು ಮತ್ತು

ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ಭಾರತದ ಪರಿಹಾರ/ 2.5 ಮಿಲಿಯನ್ ಡಾಲರ್‌ ಪರಿಹಾರ ಧನ ಬಿಡುಗಡೆ Read More »

ಅಂಕೋಲಾ: ರಾ. ಹೆ 66ರಲ್ಲಿ ಭಾರಿ ಭೂಕುಸಿತ| ಏಳು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು

ಅಂಕೋಲಾ: ರಾ. ಹೆ 66ರಲ್ಲಿ ಭಾರಿ ಭೂಕುಸಿತ| ಏಳು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿಬಂದ ಆನೆಯ ಮೃತದೇಹ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಆನೆ ಮೃತದೇಹ ತೇಲಿಬಂದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ. ನಿರಂತರ ಮಳೆಯಿಂದ ತುಂಬಿ ಹರಿಯುತ್ತಿರುವ ನೀರಿನ ಮಟ್ಟವನ್ನು ವೀಕ್ಷಣೆಗೆ ಸೋಮವಾರ ತಡ ರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ್ದ ವೇಳೆ ನೆರೆ ನೀರಿನಲ್ಲಿ ತೇಲಿಬರುತ್ತಿರುವುದು ಕಂಡುಬಂದಿದ್ದು ಸೂಕ್ಷ್ಮವಾಗಿ ಗಮನಿಸಿದಾಗ ಆನೆ ಮೃತದೇಹ ಎಂಬುದು ಗೊತ್ತಾಗಿದೆ. ಆನೆ ಕೆಲದಿನಗಳ ಹಿಂದೆಯೇ ಎಲ್ಲೋ ಸತ್ತು ಈ ಭಾಗಕ್ಕೆ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆ ಮೃತದೇಹ ನೀರಿನಲ್ಲಿ ಕೊಚ್ಚಿ

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿಬಂದ ಆನೆಯ ಮೃತದೇಹ Read More »

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದು ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆಯಾಗಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್ Read More »

ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ| ಉಜಿರೆ ಮೂಲದ ಐವರು ಪೊಲೀಸ್ ವಶ

ಸಮಗ್ರ ನ್ಯೂಸ್: ರಾಣಿಝರಿ ರಸ್ತೆಯಲ್ಲಿ ಹುಚ್ಚಾಟ ನಡೆಸಿದ್ದ ಬೆಳ್ತಂಗಡಿ ತಾಲೂಕಿನ ಉಜಿರೆಯ ಬೈಕ್ ಸವಾರರನ್ನು ಪೊಲೀಸರು ಬಂಧಿಸಿದ್ದಾರೆ. ಐವರು ಪುಂಡರನ್ನು ಬಾಳೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗಿರೀಶ್, ಗಣೇಶ್, ಪ್ರವೀಣ, ರೋಹಿತ್, ಗಣೇಶ್ ಭಂಡಾರಿ ಬಂಧಿತರು. 4 ಬೈಕ್​ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ರಾಣಿಝರಿ ಫಾಲ್ಸ್ ರಸ್ತೆಯಲ್ಲಿ ಹುಚ್ಚಾಟ ಮೆರೆದು ಪ್ರವಾಸಿಗರಿಗೆ ಕಿರಿಕಿರಿ ಮಾಡಿದ್ದರು. ಯುವಕರ ಬೈಕ್ ವೀಲ್ಹಿಂಗ್ ವಿಡಿಯೋ ವೈರಲ್ ಬೆನ್ನಲ್ಲೇ ಬಾಳೂರು ಪೊಲೀಸ್ ‌ಠಾಣೆಯಲ್ಲಿ ಐವರ ವಿರುದ್ಧ ಕಲಂ 281,292 ಬಿಎನ್​ಎಸ್ ಅಡಿ

ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ| ಉಜಿರೆ ಮೂಲದ ಐವರು ಪೊಲೀಸ್ ವಶ Read More »

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಆ.1ರಿಂದ ಏಳನೇ ವೇತನ ಆಯೋಗದ ಶಿಫಾರಸು ಜಾರಿ

ಸಮಗ್ರ ನ್ಯೂಸ್: ಏಳನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಪರಿಷ್ಕೃತ ವೇತನ ಶ್ರೇಣಿ ಆಗಸ್ಟ್ 1ರಿಂದ ನೌಕರರಿಗೆ ಸಿಗಲಿದೆ. ವೇತನ ಪರಿಷ್ಕರಣೆಗಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್ ನೇತೃತ್ವದ ಏಳನೇ ವೇತನ ಆಯೋಗವನ್ನು ಸರ್ಕಾರ ರಚಿಸಿತ್ತು. ಶೇಕಡ 31ರಷ್ಟು ತುಟ್ಟಿಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸುವ ಜತೆಗೆ, ಶೇ 27.50ರಷ್ಟು ಫಿಟ್‌ಮೆಂಟ್ ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು. 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಶೇ 17ರಷ್ಟು ಮಧ್ಯಂತರ ಪರಿಹಾರ ನೀಡುವ ನಿರ್ಧಾರವನ್ನು ಬಸವರಾಜ ಬೊಮ್ಮಾಯಿ ನೇತೃತ್ವದ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್| ಆ.1ರಿಂದ ಏಳನೇ ವೇತನ ಆಯೋಗದ ಶಿಫಾರಸು ಜಾರಿ Read More »

ಕ್ಯಾಮ್ಲಿನ್ ಸಂಸ್ಥಾಪಕ‌ ಸುಭಾಷ್ ದಾಂಡೇಕರ್ ನಿಧನ

ಸಮಗ್ರ ನ್ಯೂಸ್: ಸ್ಟೇಷನರಿ ಬ್ರಾಂಡ್ ಕ್ಯಾಮ್ಲಿನ್ ಸಂಸ್ಥಾಪಕ ಸುಭಾಷ್ ದಾಂಡೇಕರ್ ಸೋಮವಾರ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ದಾಂಡೇಕರ್ ಅವರಿಗೆ 86 ವರ್ಷ ವಯಸ್ಸಾಗಿತ್ತು. ಜನಪ್ರಿಯ ಕಲಾಕೃತಿ ಬ್ರಾಂಡ್ ಅನ್ನು ಜಪಾನ್ನ ಕೊಕುಯೊಗೆ ಮಾರಾಟ ಮಾಡಿದ ನಂತರ, ದಾಂಡೇಕರ್ ಕೊಕುಯೊ ಕ್ಯಾಮ್ಲಿನ್ನ ಅಧ್ಯಕ್ಷ ಎಮೆರಿಟಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಕ್ಯಾಮ್ಲಿನ್ ಸಂಸ್ಥಾಪಕ‌ ಸುಭಾಷ್ ದಾಂಡೇಕರ್ ನಿಧನ Read More »

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಗರ ಮಾದರಿಯ ಉತ್ತಮ ಶಿಕ್ಷಣ ಪದ್ಧತಿ ಸ್ಥಳಾಂತರಗೊಂಡು ಅಂಬೆಟಡ್ಕ ಆರ್ಯುವೇದ ಕಾಲೇಜು ಮುಂಭಾಗ ಅಡ್ಕಾರ್ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿದೆ. ಮೊಂಟೆಸ್ಸರಿ ಪದ್ಧತಿಗೆ ಅನುಗುಣವಾದ ಕಲಿಕೆಗೆ ಪೂಕರವಾದ ಕಲಿಕಾ ಸಾಮಾಗ್ರಿಗಳೊಂದಿಗೆ ಸುಸಜ್ಜಿತವಾದ ಪತ್ಯೇಕ ತರಗತಿ ಕೊಠಡಿಯಿರುವ ಸಂಸ್ಥೆ Play group, Pre kg, Lkg, Ukg, 1 ರಿಂದ 10 ತರಗತಿವರೆಗೆ ಕೋಚಿಂಗ್ ಕ್ಲಾಸ್, ಡ್ರಾಯಿಂಗ್ ಸಂಗೀತ, ಸ್ಪೋಕನ್ ಇಂಗ್ಲಿಷ್ ತರಗತಿ ನೀಡಲು ಸುಸಜ್ಜಿತವಾದ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸ್ಥಳಾಂತರಗೊಂಡು ಶುಭಾರಂಭ Read More »

ಭಾರೀ ಮಳೆ ಹಿನ್ನಲೆ|ಉಡುಪಿ ಜಿಲ್ಲೆಯಲ್ಲಿನಾಳೆ(ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 16-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ಜು.16ರಂದು ರಜೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆ|ಉಡುಪಿ ಜಿಲ್ಲೆಯಲ್ಲಿನಾಳೆ(ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »