July 2024

ಜು.22 ರಿಂದ ರಾಜ್ಯದ 250 ಅಂಗನವಾಡಿಗಳಲ್ಲಿ LKG, UKG ಆರಂಭ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ( LKG, UKG ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ […]

ಜು.22 ರಿಂದ ರಾಜ್ಯದ 250 ಅಂಗನವಾಡಿಗಳಲ್ಲಿ LKG, UKG ಆರಂಭ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಭಾರತೀಯ ಸೇನೆಯಿಂದ ಮಹಿಳೆಯರಿಗೆ ಬೈಕ್ ರ್‍ಯಾಲಿ| ಸುಳ್ಯದ ವೃಷ್ಟಿ ಮಲ್ಕಜೆ ಆಯ್ಕೆ

ಸಮಗ್ರ ವಾರ್ತೆ: ಕಾರ್ಗಿಲ್‌ ವಿಜಯ ದಿನದ ಗೌರವಾರ್ಥ ಭಾರತೀಯ ಸೇನೆಯು 25 ಮಹಿಳೆಯರ ಆಲ್‌ವುಮೆನ್‌ ಬೈಕ್‌ ರ್‍ಯಾಲಿ ಆಯೋಜಿಸಿದ್ದು, 2000 ಕಿ.ಮೀ. ಮಾರ್ಗದ ಈ ರ್‍ಯಾಲಿಯಲ್ಲಿ ಕರ್ನಾಟಕದಿಂದ ಪಾಲ್ಗೊಂಡಿದ್ದ ಇಬ್ಬರಲ್ಲಿ ಸುಳ್ಯ ತಾಲೂಕಿನ ಪಂಜ ಸಮೀಪದ ವೃಷ್ಟಿ ಮಲ್ಕಜೆ ಕೂಡ ಸೇರಿದ್ದಾರೆ. ಇವರು ಪುತ್ತೂರು ಹಾಗೂ ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಪುರುಷೋತ್ತಮ ಮಲ್ಕಜೆ ಹಾಗೂ ಉಷಾ ಮಲ್ಕಜೆ ದಂಪತಿಯ ಪುತ್ರಿ. ಜು.4ರಂದು ಹಿಮಾಚಲ ಪ್ರದೇಶದ ಲೇಹ್‌ನಿಂದ ಆರಂಭಗೊಂಡ ರ್‍ಯಾಲಿ ಲಡಾಕ್‌ನ ವಿವಿಧ ಸ್ಥಳಗಳ ಮೂಲಕ ಕಾರ್ಗಿಲ್‌ ಹುತಾತ್ಮರ ಸ್ಮಾರಕಕ್ಕೆ

ಭಾರತೀಯ ಸೇನೆಯಿಂದ ಮಹಿಳೆಯರಿಗೆ ಬೈಕ್ ರ್‍ಯಾಲಿ| ಸುಳ್ಯದ ವೃಷ್ಟಿ ಮಲ್ಕಜೆ ಆಯ್ಕೆ Read More »

ಇಂದಿನಿಂದ ವಿಧಾನ ಮಂಡಲ ಅಧಿವೇಶನ| ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಅಧಿಕಾರಿಗಳ ಜೊತೆ ಸಭೆ ಮಾಡಿದರು. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ

ಇಂದಿನಿಂದ ವಿಧಾನ ಮಂಡಲ ಅಧಿವೇಶನ| ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.15) ರಜೆ‌ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 15-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.15) ರಜೆ‌ ಘೋಷಣೆ Read More »

ಟ್ರಂಪ್ ಮೇಲೆ‌ ಗುಂಡಿನ ದಾಳಿ| ಅಮೇರಿಕಾದ ಮಾಜಿ ಅಧ್ಯಕ್ಷ ಗಂಭೀರ

ಸಮಗ್ರ ನ್ಯೂಸ್: ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರವಾಗಿ ಗಾಯಗೊಂಡಿದ್ದಾರೆ ವರದಿಯಾಗಿದೆ. ‌ದಾಳಿಯಿಂದ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಒಸರುತ್ತಿರುವುದು ಕಂಡುಬಂದಿದೆ. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಆರಂಭಿಕ ದೊಡ್ಡ ಸ್ಫೋಟದ ನಂತರ ಟ್ರಂಪ್ ಗಾಯಗೊಂಡಂತೆ ನೆಲಕ್ಕೆ ಬಿದ್ದರು. ಭದ್ರತಾ ಸಿಬ್ಬಂದಿ ಮಾಜಿ ಅಧ್ಯಕ್ಷರನ್ನು ತ್ವರಿತವಾಗಿ ರಕ್ಷಿಸಿ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದಂತೆ ಅನೇಕ ಪ್ರೇಕ್ಷಕರಿಂದ ಕಿರುಚಾಟಗಳು

ಟ್ರಂಪ್ ಮೇಲೆ‌ ಗುಂಡಿನ ದಾಳಿ| ಅಮೇರಿಕಾದ ಮಾಜಿ ಅಧ್ಯಕ್ಷ ಗಂಭೀರ Read More »

ಅಪ್ರಾಪ್ತ ಬಾಲಕಿಗೆ ಬಸ್ಸಿನಲ್ಲಿ ಕಿರುಕುಳ: ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಬಸ್ಸಿನಲ್ಲಿ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಿಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ನಡೆದಿದೆ. KSRTC ಬಸ್ನಲ್ಲಿ ಈತ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ ಕಾಮುಕ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ

ಅಪ್ರಾಪ್ತ ಬಾಲಕಿಗೆ ಬಸ್ಸಿನಲ್ಲಿ ಕಿರುಕುಳ: ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದಾರೆ. ಇದರಿಂದ ಡೆಂಗ್ಯೂಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಸಾವಾಗಿದೆ. ಪುತ್ತೂರು ತಾಲೂಕು ಪಡ್ನೂರಿನ ಯತೀಶ್ (50) ಮೃತರು. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿಯಾದ ಯತೀಶ್ ಅವರಿಗೆ ಜುಲೈ 10ರಂದು ಜ್ವರ ಕಾಣಿಸಿಕೊಂಡಿತು. ವಿಪರೀತ ಜ್ವರದ ಹಿನ್ನೆಲೆಯಲ್ಲಿ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ Read More »

ಮಾನಸಿಕವಾಗಿ ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದ ಆರ್‌ಎನ್‌ಜೆಡ್ ಅಪಾರ್ಟ್‌ಮೆಂಟ್‌ನಲ್ಲಿ ತಾಯಿ ಮತ್ತು ಮಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಭಾರ್ಗವ್ ಪುಲಿವರ್ತ (13), ತಾಯಿ ರಮ್ಯಾ (40) ಮೃತ ದುರ್ದೈವಿಗಳು. ಆಂಧ್ರ ಪ್ರದೇಶದ ರಮ್ಯಾ ಶ್ರೀಧರ್ ಎಂಬುವವರನ್ನು ಪ್ರೀತಿಸಿ, ಅಂತರ್ಜಾತಿ ವಿವಾಹವಾಗಿದ್ದರು. ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಶ್ರೀಧರ್ ಪುಲಿವರ್ತ ಮೂರು ತಿಂಗಳ ಹಿಂದೆ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದರು. ಇವರಿದ್ದ ಫ್ಲ್ಯಾಟ್ ಬಾಡಿಗೆ 45 ಸಾವಿರ, ಮಕ್ಕಳಿಬ್ಬರ ಶಾಲೆ ಫೀಸ್, ಮನೆ ನಿರ್ವಹಣೆ

ಮಾನಸಿಕವಾಗಿ ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಈ ವಾರದ ದ್ವಾದಶ ರಾಶಿಗಳ ವಾರಭವಿಷ್ಯ ಏನಿದೆ ತಿಳಿಯೋಣ… ಮೇಷ:ನಿಮ್ಮ ಕೆಲಸ ಕಾರ್ಯಗಳಲ್ಲಿ ಯಾವುದೇ ಅಡಚಣೆ ಇರುವುದಿಲ್ಲ. ದಿನ ಕಳೆದಂತೆ ಪ್ರಯತ್ನಕ್ಕೆ ತಕ್ಕ ಶುಭ ಫಲಗಳನ್ನು ಪಡೆಯುವಿರಿ. ಕಷ್ಟದ ಸಂದರ್ಭದಲ್ಲಿ ಸ್ನೇಹಿತರಿಗೆ ಸಹಾಯ ಮಾಡುವಿರಿ. ಅತಿಯಾದ ಜವಾಬ್ದಾರಿಯಿಂದ ಬೇಸರಗೊಳ್ಳುವಿರಿ. ಸ್ವಂತ ಕೆಲಸ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕರಾವಳಿಯಲ್ಲಿ ಭಾರೀ ಮಳೆ‌ ಹಿನ್ನೆಲೆ|ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜುಲೈ 14 ಹಾಗೂ 15ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇದೇ ಜಿಲ್ಲೆಗಳಿಗೆ ಜುಲೈ 16, 17ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಜುಲೈ17ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು,

ಕರಾವಳಿಯಲ್ಲಿ ಭಾರೀ ಮಳೆ‌ ಹಿನ್ನೆಲೆ|ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ Read More »