July 2024

ಹಿರಿಯ ಪತ್ರಕರ್ತೆ ಆಯೆಷಾ ಖಾನಂ ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ‌‌ ನೇಮಕ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದರೊಂದಿಗೆಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಮಹಿಳೆಯೊಬ್ಬರು ಅಧ್ಯಕ್ಷರಾಗಿ ನೇಮಕಗೊಂಡಿರುವುದು ಇದೇ ಮೊದಲು. ಪ್ರಥಮ ಬಾರಿಗೆ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸ್ಥಾನವನ್ನು ಉನ್ನತ ಶ್ರೇಣಿಯ ಅಲ್ಪಸಂಖ್ಯಾತ ಮಹಿಳೆಯೊಬ್ಬರು ತಮ್ಮ ವೃತ್ತಿಪರತೆಯನ್ನು ಉಳಿಸಿಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರು 20 ವರ್ಷಗಳಿಂದ ಮಾಧ್ಯಮ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ದಿ ಏಷ್ಯನ್ ಏಜ್, ಸ್ಟಾರ್ ನ್ಯೂಸ್, ಆಜ್ ತಕ್, ದೂರದರ್ಶನ […]

ಹಿರಿಯ ಪತ್ರಕರ್ತೆ ಆಯೆಷಾ ಖಾನಂ ಮಾಧ್ಯಮ ಅಕಾಡೆಮಿ ಅಧ್ಯಕ್ಷೆಯಾಗಿ‌‌ ನೇಮಕ Read More »

ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಗೆ ಲವ್ ಜಿಹಾದ್ ಕಾರಣವಲ್ಲ| ಸಿಐಡಿ ಚಾರ್ಜ್ ಶೀಟ್ ನಲ್ಲಿ ಹೇಳಿದ್ದೇನು?

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎಂಬ ಕಾಲೇಜು ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಕುರಿತು ಎಲ್ಲಿಯೂ ಉಲ್ಲೇಖವಾಗಿಲ್ಲ. ನೇಹಾ ಹಿರೇಮಠ ಹತ್ಯೆಗೆ ಆರೋಪಿಯ ಹತಾಶೆಯೇ ಕಾರಣ ಎಂದು ಸಿಐಟಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ವೇಳೆ, ಲವ್ ಜಿಹಾದ್​ ಕುರಿತ ಯಾವುದೇ ವಿಚಾರಗಳನ್ನು ನಮೂದಿಸಿಲ್ಲ. ಒಟ್ಟು 483 ಪುಟಗಳ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.ಆರೋಪಿ ಫಯಾಜ್

ಹುಬ್ಬಳ್ಳಿ: ನೇಹಾ ಹಿರೇಮಠ್ ಕೊಲೆಗೆ ಲವ್ ಜಿಹಾದ್ ಕಾರಣವಲ್ಲ| ಸಿಐಡಿ ಚಾರ್ಜ್ ಶೀಟ್ ನಲ್ಲಿ ಹೇಳಿದ್ದೇನು? Read More »

ರಾಹುಲ್ ಗಾಂಧಿ ವಿರುದ್ದ ವಿವಾದಾತ್ಮಕ ಹೇಳಿಕೆ| ಶಾಸಕ‌ ಭರತ್ ಶೆಟ್ಟಿ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್​ಐಆರ್​​ ದಾಖಲಿಸಲಾಗಿದೆ. ಪಾಲಿಕೆ ಸದಸ್ಯ ಕಾಂಗ್ರೆಸ್​​ನ ಅನಿಲ್ ಕುಮಾರ್ ನೀಡಿದ್ದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. BNS 351(3), 353 ಸೆಕ್ಷನ್ ಅಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯೆ, ಭರತ್ ಶೆಟ್ಟಿ ಹೇಳಿಕೆ ಖಂಡಿಸಿ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ರಾಹುಲ್ ಗಾಂಧಿ ವಿರುದ್ದ ವಿವಾದಾತ್ಮಕ ಹೇಳಿಕೆ| ಶಾಸಕ‌ ಭರತ್ ಶೆಟ್ಟಿ ಮೇಲೆ ಎಫ್ಐಆರ್ Read More »

ಆಮ್‌ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್‌/ ಮಾಜಿ ಸಚಿವ ರಾಜ್‌ಕುಮಾರ್ ಆನಂದ್ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್‌: ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಅವರು ಇಂದು ದೆಹಲಿಯಲ್ಲಿ ಬಿಜೆಪಿಯ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್‌ ದೇವ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್‌ ಉಪಸ್ಥಿತಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. “ನನಗೆ ಪಕ್ಷಕ್ಕೆ ಸೇರಲು ಅವಕಾಶ ನೀಡಿದ ಬಿಜೆಪಿಗೆ ನಾನು ಆಭಾರಿಯಾಗಿದ್ದೇನೆ. ವಿಶೇಷವಾಗಿ ನಾನು ಸೇರಿರುವ ಉದ್ದೇಶ ದಲಿತ ಸಮುದಾಯದ ಕಲ್ಯಾಣಕ್ಕಾಗಿ, ಅದಕ್ಕಾಗಿ ಕೆಲಸ ಮಾಡಲು ನಾನು ಬದ್ಧನಾಗಿದ್ದೇನೆ” ಎಂದು ಆನಂದ್‌ ಹೇಳಿದರು. ಇದೇ ಸಂದರ್ಭದಲ್ಲಿ

ಆಮ್‌ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್‌/ ಮಾಜಿ ಸಚಿವ ರಾಜ್‌ಕುಮಾರ್ ಆನಂದ್ ಬಿಜೆಪಿ ಸೇರ್ಪಡೆ Read More »

ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶವನ್ನು ಪಡೆಯಲು ಅರ್ಹಳು/ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌

ಸಮಗ್ರ ನ್ಯೂಸ್‌: ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 125 ರ ಅಡಿಯಲ್ಲಿ ಜೀವನಾಂಶವನ್ನು ಪಡೆಯಲು ಅರ್ಹಳು ಎಂದು ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ ನೀಡಿದೆ. ಮುಸ್ಲಿಂ ಮಹಿಳೆಯರ (ವಿಚ್ಛೇದನದ ಮೇಲಿನ ಹಕ್ಕುಗಳ ರಕ್ಷಣೆ) ಕಾಯಿದೆ 1986, ಜಾತ್ಯತೀತಕ್ಕಿಂತ ಮೇಲುಗೈ ಸಾಧಿಸುವುದಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು, ತನ್ನ ಮಾಜಿ ಪತ್ನಿಗೆ ₹10,000 ಮಧ್ಯಂತರ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ ನೀಡಿರುವ

ವಿಚ್ಛೇದಿತ ಮುಸ್ಲಿಂ ಮಹಿಳೆ ಜೀವನಾಂಶವನ್ನು ಪಡೆಯಲು ಅರ್ಹಳು/ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ Read More »

ಮಂಗಳೂರು: ಪೇದೆಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

ಸಮಗ್ರ ನ್ಯೂಸ್: ಕಿರಿಯ ಪೊಲೀಸ್‌ ಅಧಿಕಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್ ಲೋಕಾಯುಕ್ತ ಬಲೆಗೆ ಬಿದ್ದವ. ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಲಂಚಕ್ಕೆ ಡಿಮಾಂಡ್ ಮಾಡಿದ್ದ ಆರೀಸ್ ರೂ 18 ಸಾವಿರ ಲಂಚದ ರೂಪದಲ್ಲಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಗೆಸ್ಟ್ ಹೌಸ್ ಡ್ಯೂಟಿ ಹಾಕಬೇಕಿದ್ದರೇ ಪ್ರತಿ ತಿಂಗಳು 6

ಮಂಗಳೂರು: ಪೇದೆಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್ Read More »

ವಾಲ್ಮೀಕಿ ನಿಗಮ‌ ಅಕ್ರಮ ಆರೋಪ| ಮಾಜಿ ಸಚಿವ ಬಿ.‌ನಾಗೇಂದ್ರರನ್ನು ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಂತರ ವಶಕ್ಕೆ ಪಡೆದಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹185 ಕೋಟಿಗಳಿಗೂ ಹೆಚ್ಚಿನ ಅವ್ಯವಹಾರದ ಹಿನ್ನೆಲೆಯಲ್ಲಿ, ನಾಗೇಂದ್ರ ಅವರ ಡಾಲರ್ಸ್ ಕಾಲೋನಿಯ ಮನೆ ಸೇರಿದಂತೆ, ಸಂಬಂಧಿಸಿದ ಆಸ್ತಿಗಳಿರುವ ಬಿಇಎಲ್ ರೋಡ್,

ವಾಲ್ಮೀಕಿ ನಿಗಮ‌ ಅಕ್ರಮ ಆರೋಪ| ಮಾಜಿ ಸಚಿವ ಬಿ.‌ನಾಗೇಂದ್ರರನ್ನು ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ Read More »

ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಬಿ. ಮನೆ ಸೇರಿದಂತೆ ಹಲವು ಕಡೆ‌ ಇಡಿ ದಾಳಿ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ ಇ.ಡಿ ದಾಳಿ ನಡೆದಿದೆ. ಡಾಲರ್ಸ್‌ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆದಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ನೆಹರೂ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ವಾಲ್ಮೀಕಿ

ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಬಿ. ಮನೆ ಸೇರಿದಂತೆ ಹಲವು ಕಡೆ‌ ಇಡಿ ದಾಳಿ Read More »

ಮಂಗಳೂರು: ಸ್ಥಳ ಮಹಜರು‌ ವೇಳೆ‌ ಪರಾರಿಯಾಗಲೆತ್ನಿಸಿದ ಚಡ್ಡಿಗ್ಯಾಂಗ್ ತಂಡ| ಪೊಲೀಸರಿಂದ‌ ಶೂಟೌಟ್, ಇಬ್ಬರಿಗೆ ಗುಂಡು

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ನಗರದ ಹೊರವಲಯದ ಪಡುಪಣಂಬೂರು ಎಂಬಲ್ಲಿ ಸ್ಥಳ‌ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ದರೋಡೆ ಆರೋಪಿಗಳನ್ನು ನಿನ್ನೆ ಸಕಲೇಶಪುರದಿಂದ ಬಂಧಿಸಿ ತರಲಾಗಿತ್ತು. ಬುಧವಾರ ಬೆಳಗ್ಗೆ ಸ್ಥಳ ಮಹಜರು ವೇಳೆ ಎಎಸ್ ಐ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ದರೋಡೆಕೋರರ

ಮಂಗಳೂರು: ಸ್ಥಳ ಮಹಜರು‌ ವೇಳೆ‌ ಪರಾರಿಯಾಗಲೆತ್ನಿಸಿದ ಚಡ್ಡಿಗ್ಯಾಂಗ್ ತಂಡ| ಪೊಲೀಸರಿಂದ‌ ಶೂಟೌಟ್, ಇಬ್ಬರಿಗೆ ಗುಂಡು Read More »

ಬಾಲಕನಿಗೆ ಕಿರುಕುಳ ನೀಡಿದ ಆರೋಪ/ ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾ

ಸಮಗ್ರ ನ್ಯೂಸ್‌: ಟಿಬೆಟನ್ ಧರ್ಮಗುರು ದಲೈಲಾಮ ವಿರುದ್ಧ ಬಾಲಕನೊಬ್ಬನಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಬಾಲಕನ ತುಟಿ ಚುಂಬಿಸಿ, ತಮ್ಮ ನಾಲಿಗೆ ಚೀಪುವಂತೆ ದಲೈಲಾಮ ಅವರು ಹೇಳುವ ವಿಡಿಯೋ ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವಿವಾದಕ್ಕೆ ಕಾರಣವಾಗಿತ್ತು. ದಲೈಲಾಮ ವಿರುದ್ಧ ಪೋಟೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ‘ಕಾನ್ಸೆಡರೇಷನ್ ಆಫ್ ಎನ್‌ಜಿಒ’ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ

ಬಾಲಕನಿಗೆ ಕಿರುಕುಳ ನೀಡಿದ ಆರೋಪ/ ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾ Read More »