July 2024

ಸಕಲೇಶಪುರದಲ್ಲಿ ಭಾರೀ ಭೂಕುಸಿತ| ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ

ಸಮಗ್ರ ನ್ಯೂಸ್: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಭಯಾನಕ ಭೂ ಕುಸಿತವಾಗಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್ ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ […]

ಸಕಲೇಶಪುರದಲ್ಲಿ ಭಾರೀ ಭೂಕುಸಿತ| ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ Read More »

ವಯನಾಡು ಭೂಕುಸಿತ ದುರಂತ| ಮೃತರ‌ ಸಂಖ್ಯೆ 36ಕ್ಕೆ ಏರಿಕೆ| ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿ; ಮತ್ತೆಮತ್ತೆ ಕುಸಿಯುತ್ತಿರುವ ಭೂಮಿ

ಸಮಗ್ರ ನ್ಯೂಸ್: ಮಂಗಳವಾರ ಮುಂಜಾನೆ ಕೇರಳದ ಗುಡ್ಡಗಾಡು ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ, ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಸಾವನ್ನಪ್ಪಿದೆ ಎಂದು ವಯನಾಡ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಕ್ಕೈ,

ವಯನಾಡು ಭೂಕುಸಿತ ದುರಂತ| ಮೃತರ‌ ಸಂಖ್ಯೆ 36ಕ್ಕೆ ಏರಿಕೆ| ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿ; ಮತ್ತೆಮತ್ತೆ ಕುಸಿಯುತ್ತಿರುವ ಭೂಮಿ Read More »

2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ

ಸಮಗ್ರ ನ್ಯೂಸ್‌: ಭಾರತವು 2025 ರ ಪುರುಷರ ಏಷ್ಯಾಕಪ್ ಅನ್ನು ಆಯೋಜಿಸುವ ಹಕ್ಕು ಪಡೆದಿದೆ. ಈ ಟೂರ್ನಿ 20 ಓವರ್‌ಗಳ ಮಾದರಿಯಲ್ಲಿ ನಡೆಯಲಿದೆ. ಇದರಲ್ಲಿ 6 ತಂಡಗಳು ಭಾಗವಹಿಸಲಿದ್ದು, ಈಗಾಗಲೇ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ತಂಡಗಳು ಅರ್ಹತೆ ಪಡೆದುಕೊಂಡಿದ್ದು, ಆರನೇ ತಂಡವನ್ನು ಅರ್ಹತಾ ಸುತ್ತಿನ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿದ IEOI ದಾಖಲೆಯ ಪ್ರಕಾರ, ಭಾರತವು 2025 ರಲ್ಲಿ ನಡೆಯಲ್ಲಿರುವ ಪುರುಷರ ಏಷ್ಯಾಕಪ್‌ಗೆ ಆತಿಥ್ಯ ವಹಿಸಲಿದೆ. ಈ ಟೂರ್ನಿ ಟಿ20

2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ Read More »

ಏರುತ್ತಿರುವ ಟೊಮೆಟೋ ದರ/ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

ಸಮಗ್ರ ನ್ಯೂಸ್‌: ನೂರು ರೂಗಿಂತ ಅಧಿಕಗೊಂಡಿರುವ ಟೊಮೆಟೋ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್‌ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್‌ಸಿಸಿಎಫ್‌ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದ್ದು, ಒಂದು ಕಿಲೋ ಟೊಮೆಟೋ 60 ರೂಗೆ ಸಿಗಲಿದೆ. ದೇಶದ ಹಲವೆಡೆ ಟೊಮೆಟೊ ಬೆಲೆ 70 ರೂಗಿಂತ ಮೇಲೇರಿದೆ. ದೆಹಲಿ ಮೊದಲಾದ ಕೆಲವೆಡೆಯಂತೆ ಬೆಲೆ 120

ಏರುತ್ತಿರುವ ಟೊಮೆಟೋ ದರ/ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ Read More »

ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್‌ರಹಿತ ದಿನ/ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ

ಸಮಗ್ರ ನ್ಯೂಸ್‌: ಪ್ರತಿ ಶೈಕ್ಷಣಿಕ ವರ್ಷದಲ್ಲಿ 6 ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ 10 ದಿನಗಳವರೆಗೆ ಬ್ಯಾಗ್‌ರಹಿತ ದಿನಗಳನ್ನು ಜಾರಿಗೊಳಿಸುವ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ (ಎನ್‌ಸಿಇಆರ್‌ಟಿ) ಅಂಗಸಂಸ್ಥೆಯಾದ ಪಂಡಿತ್ ಸುಂದರ್ಲಾಲ್ ಶರ್ಮಾ (ಪಿಎಸ್‌ಎಸ್) ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಫಾರ್ ವೊಕೇಷನಲ್ ಎಜುಕೇಷನ್‌ ಈ ಕುರಿತು ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (2020) ನಾಲ್ಕನೇ ವರ್ಷಾಚರಣೆ ಸಂದರ್ಭದಲ್ಲಿ ಅದನ್ನು ಬಿಡುಗಡೆ ಮಾಡಲಾಗಿದೆ.

ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್‌ರಹಿತ ದಿನ/ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ Read More »

ಮುಜರಾಯಿ ದೇಗುಲಗಳಲ್ಲಿಯೂ ಆನ್‌ಲೈನ್ ಸೇವೆ/ ಅರ್ಚಕರ ಒಕ್ಕೂಟದಿಂದ ಧಾರ್ಮಿಕ ದತ್ತಿ ಆಯುಕ್ತರಿಗೆ ಪತ್ರ

ಸಮಗ್ರ ನ್ಯೂಸ್‌: ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯಲ್ಲಿರೋ ಮುಜರಾಯಿ ದೇಗುಲಗಳಲ್ಲಿಯೂ ಆನ್‌ಲೈನ್ ಸೇವೆ ನೀಡುತ್ತಿದ್ದು, ದೇವಾಲಯಗಳ ಈ ಆನ್‌ಲೈನ್ ಸೇವೆಗೆ ಅರ್ಚಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಆನ್‌ಲೈನ್‌ನಲ್ಲಿ ಕೆಲ ಭಕ್ತರು ಸಂಜೆ ಅಥವಾ ರಾತ್ರಿ ಅಭಿಷೇಕ, ಪ್ರಸಾದ ಇತ್ಯಾದಿ ಸೇವೆಗಳನ್ನು ಬುಕ್ ಮಾಡ್ತಾರೆ. ಮರುದಿನ ಬೆಳಗ್ಗೆಯೇ ಬುಕ್ ಮಾಡಿದ ಭಕ್ತಾದಿಗಳ ಸೇವೆ ಮಾಡಲು ಕಷ್ಟವಾಗುತ್ತದೆ. ದೇವಾಲಯಗಳಲ್ಲಿ ಪುರೋಹಿತರಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಇದರಿಂದ ಭಕ್ತಾದಿಗಳು ತಕ್ಷಣವೇ ಬುಕ್ಕಿಂಗ್ ಮಾಡಿದ ಮಾಹಿತಿ ದೊರಕುವುದಿಲ್ಲ. ಜೊತೆಗೆ ಪ್ರಸಾದ ಹೋಟೆಲ್ ರೀತಿ ತಕ್ಷಣವೇ

ಮುಜರಾಯಿ ದೇಗುಲಗಳಲ್ಲಿಯೂ ಆನ್‌ಲೈನ್ ಸೇವೆ/ ಅರ್ಚಕರ ಒಕ್ಕೂಟದಿಂದ ಧಾರ್ಮಿಕ ದತ್ತಿ ಆಯುಕ್ತರಿಗೆ ಪತ್ರ Read More »

ಕೇರಳದ ವಯನಾಡ್ ನಲ್ಲಿ ತಡರಾತ್ರಿ 2 ಭೂಕುಸಿತ; 6 ಸಾವು|400ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ವಯನಾಡಿನ ಮೆಪ್ಪಾಡಿ ಮುಂಡಕೈಯಲ್ಲಿ ಭೂಕುಸಿತ ಉಂಟಾಗಿ ಭಾರೀ ದುರಂತ ಸಂಭವಿಸಿದೆ. ಬೃಹತ್ ಪ್ರಮಾಣದ ಎರಡು ಭೂಕುಸಿತ ಸಂಭವಿಸಿದ್ದು, ಈವರೆಗೆ ಆರು ಮೃತದೇಹಗಳು ಪತ್ತೆಯಾಗಿವೆ. 400ರಷ್ಟು ಮಂದಿ ಭೂಕುಸಿತದಿಂದ ತೊಂದರೆಗೆ ಒಳಗಾಗಿರಬಹುದೆಂದು ಶಂಕಿಸಲಾಗುತ್ತಿದೆ. ದುರಂತದಲ್ಲಿ ಹಲವು ವಾಹನಗಳು ಕೊಚ್ಚಿ ಹೋಗಿವೆ. ಚುರಲ್ಮಲಾ ಪಟ್ಟಣದ ಒಂದು ಭಾಗ ಕೊಚ್ಚಿ ಹೋಗಿದೆ. ಭೂಕುಸಿತದ ನಂತರ ಗುಡ್ಡದ ಪ್ರವಾಹದಲ್ಲಿ ಹಲವು ಮನೆಗಳು ನಾಶವಾಗಿವೆ. ವೆಲ್ಲರ್ಮಲಾ ಶಾಲೆ ಸಂಪೂರ್ಣ ಜಲಾವೃತಗೊಂಡಿದೆ. ಭೂಕುಸಿತದಿಂದ ಭಾರೀ ಹಾನಿಯಾಗಿದೆ. ವಯನಾಡು ಮೆಪ್ಪಾಡಿ ಮುಂಡಕ್ಕೆ ಪ್ರದೇಶದಲ್ಲಿ ಇಷ್ಟು

ಕೇರಳದ ವಯನಾಡ್ ನಲ್ಲಿ ತಡರಾತ್ರಿ 2 ಭೂಕುಸಿತ; 6 ಸಾವು|400ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆಯಿಂದ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕೆಲವೆಡೆ ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಜು. 30ರಂದು ತಹಶೀಲ್ದಾರ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ Read More »

ಹೌರಾ – ಮುಂಬೈ ರೈಲು ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ| ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು ಸುಮಾರು 5 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾರ್ಖಂಡ್‌ನ ಚಕ್ರಧರಪುರದಲ್ಲಿ ರಾಜ್‌ಖರ್ಸ್ವಾನ್ ಮತ್ತು ಬಡಬಾಂಬೋ ನಡುವೆ ಬೆಳಿಗ್ಗೆ 4.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ರೈಲು ಸಂಖ್ಯೆ. 12810 ಹೌರಾ-CSMT ಎಕ್ಸ್‌ಪ್ರೆಸ್ ಹೊರಡುತ್ತಿದ್ದಾಗ ಚಕ್ರಧರಪುರ ಬಳಿ ರಾಜ್‌ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಚಕ್ರಧರಪುರ

ಹೌರಾ – ಮುಂಬೈ ರೈಲು ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ| ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ Read More »

ವಯನಾಡಿನಲ್ಲಿ ಭಾರೀ ಭೂಕುಸಿತ| ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ (ಜು.30) ಮುಂಜಾನೆ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೊಂದರೆಗೀಡಾಗಿರುವ ಪ್ರದೇಶಗಳಿಗೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಕೋಪ ಪರಿಹಾರ ಸ್ಪಂದನೆ ಪಡೆ (ಎನ್ ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್ಡಿಆರ್ಎಫ್ ತಂಡವನ್ನೂ ಕಳುಹಿಸಿಕೊಡಲಾಗುತ್ತಿದೆ ಎಂದು ಕೇರಳ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರ ಹೇಳಿದೆ. ಪರಿಹಾರ ಕಾರ್ಯಾಚರಣೆಗೆ ನೆರವಾಗುವಂತೆ ಕಣ್ಣೂರು ಡಿಫೆನ್ಸ್ ಸೆಕ್ಯುರಿಟಿ ಕಾಪ್ಸ್ನ ಎರಡು ತಂಡಗಳಿಗೆ ಈಗಾಗಳೇ ಸೂಚನೆ ನೀಡಲಾಗಿದೆ.

ವಯನಾಡಿನಲ್ಲಿ ಭಾರೀ ಭೂಕುಸಿತ| ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »