July 2024

ಸುಳ್ಯ: ಐವರ್ನಾಡು ಗ್ರಾಮಸಭೆಯಲ್ಲಿ ಕಾವೇರಿದ ಚರ್ಚೆ| ರಸ್ತೆ ದುರವಸ್ಥೆ, ಪಂಚಾಯತ್ ಆಡಳಿತದ ವಿರುದ್ದ ಹರಿಹಾಯ್ದ ಗ್ರಾಮಸ್ಥರು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡು ಗ್ರಾಮಸಭೆಯ ಮೊದಲ ಹಂತದ ಗ್ರಾಮಸಭೆ ಜು.3ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಸಭೆಯ‌ ಉಸ್ತುವಾರಿಯನ್ನು ಯುವಜನ ಸೇವಾ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ವಹಿಸಿದ್ದರು. ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಲೀಲಾವತಿ ಕುತ್ಯಾಡಿ ವಹಿಸಿದ್ದರು. ಸಭೆಯಲ್ಲಿ ರಸ್ತೆ, ವಿದ್ಯುತ್, ಮೂಲಸೌಕರ್ಯ ಕುರಿತು ಕಾವೇರಿದ ಚರ್ಚೆ ನಡೆಯಿತು. ಉದ್ಯೋಗ ಖಾತರಿ ಯೋಜನೆಯಲ್ಲಿ ವೈಯಕ್ತಿಕ ಕಾಮಗಾರಿ ಕ್ಷೇತ್ರ ವೀಕ್ಷಣೆ ವೇಳೆ ನಾಗರಿಕರ ಬಳಿ ಹಣ ಪಡೆದುಕೊಳ್ಳುತ್ತಾರೆ‌ ಎಂದು ಗ್ರಾಮಸ್ಥರು ಆರೋಪಿಸಿದರು. ಆಡಳಿತಾತ್ಮಕ ವೆಚ್ಚದಲ್ಲಿ ಪೋಟೋ ಮುಂತಾದ ಖರ್ಚು […]

ಸುಳ್ಯ: ಐವರ್ನಾಡು ಗ್ರಾಮಸಭೆಯಲ್ಲಿ ಕಾವೇರಿದ ಚರ್ಚೆ| ರಸ್ತೆ ದುರವಸ್ಥೆ, ಪಂಚಾಯತ್ ಆಡಳಿತದ ವಿರುದ್ದ ಹರಿಹಾಯ್ದ ಗ್ರಾಮಸ್ಥರು Read More »

5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್‌ ಪರೀಕ್ಷೆ ಈ ವರ್ಷವೂ ಇಲ್ಲ/ ಶಿಕ್ಷಣ ಇಲಾಖೆ ಸೂಚನೆ

ಸಮಗ್ರ ನ್ಯೂಸ್‌: ಬೋರ್ಡ್‌ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ, 2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳು 1ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 ಮತ್ತು ಭಾಗ 2ರ ಆಧಾರದಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಾಂಕನ

5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್‌ ಪರೀಕ್ಷೆ ಈ ವರ್ಷವೂ ಇಲ್ಲ/ ಶಿಕ್ಷಣ ಇಲಾಖೆ ಸೂಚನೆ Read More »

ಉಡುಪಿ: ಹೃದಯಾಘಾತಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಬಲಿ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಮೃತ ವಿದ್ಯಾರ್ಥಿನಿ. ಎಂದಿನಂತೆ ಶಾಲೆಗೆ ಹೋಗುತ್ತಿದ್ದ ಭಾಗ್ಯಶ್ರೀಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿದ್ದು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯಶ್ರೀ ನಿಧನ ಹೊಂದಿದ್ದಾಳೆ. ಇವಳಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಇವಳು ಪಳ್ಳಿ

ಉಡುಪಿ: ಹೃದಯಾಘಾತಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಬಲಿ Read More »

‘ವಿಶ್ವ’ ಗೆದ್ದ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ| ಇಂದು ಮೋದಿ ಭೇಟಿಯಾಗಲಿರುವ ಆಟಗಾರರು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಆಟಗಾರರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಿ ವಿಜಯೋತ್ಸವ ಆಚರಿಸಲಾಗಿದೆ. ಈಗಾಗಲೇ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಚಂಡಮಾರುತ ದಿಂದಾಗಿ ಬಾರ್ಬಡೋಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದರು. ದೆಹಲಿಯಲ್ಲಿ ಇಂದು ಬೆಳಗ್ಗೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದು, ಭೋಜನಕೂಟದಲ್ಲಿ

‘ವಿಶ್ವ’ ಗೆದ್ದ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ| ಇಂದು ಮೋದಿ ಭೇಟಿಯಾಗಲಿರುವ ಆಟಗಾರರು Read More »

ಭಾರೀ ಮಳೆ ಹಿನ್ನೆಲೆ| ಬಂಟ್ವಾಳ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು(ಜು.4) ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯಾಗುತ್ತಿರುವ ಕಾರಣ ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳ್ತಂಗಡಿ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಬಂಟ್ವಾಳ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು(ಜು.4) ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು(ಜು.4) ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ರಜೆ ನೀಡಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು(ಜು.4) ರಜೆ ಘೋಷಣೆ Read More »

ಮಡಿಕೇರಿ: ʼತುರ್ತಾಗಿ ಒಂದು ಅಪಘಾತ ಮಾಡಿʼ ಸೂಚನಾ ಫಲಕ ವೈರಲ್

ಸಮಗ್ರ ನ್ಯೂಸ್: ಹೈವೆಗಳಲ್ಲಿ, ತಿರುವುಗಳಲ್ಲಿ ನಾವು ಅಪಘಾತ ವಲಯ, ಅವಸರವೇ ಅಪಘಾತಕ್ಕೆ ಕಾರಣ ಎಂಬ ಸೂಚನಾ ಫಲಕ ಅಳವಡಿಸಿರುವುದನ್ನು ನಾವು ನೋಡಿದ್ದೇವೆ. ಅದೇ ರೀತಿ ಕರ್ನಾಟಕದ ಕೊಡಗಿನ ಬಳಿಯ ಹೆದ್ದಾರಿಯಲ್ಲಿ ಅಳವಡಿಸಲಾಗಿರುವ ತುರ್ತು ಸೂಚನಾ ಫಲಕವೊಂದು ಇದೀಗ ಅಂತರ್ಜಾಲದಲ್ಲಿ ಫುಲ್ ವೈರಲ್ ಆಗಿದೆ. ಹೌದು ಅಂತದೇನಿದೆ ಆ ನಾಮಫಲಕದಲ್ಲಿ ಅಂತಿರಾ ಈ ಫೋಟೋ ನೋಡಿ ಅದರಲ್ಲಿ “ಅವಸರವೇ ಅಪಘಾತಕ್ಕೆ ಕಾರಣ” ಹಾಗೂ “Urgent Make An Accident” ಎಂದು ಬರೆಯಲಾಗಿದೆ. ಈ ಇಂಗ್ಲಿಷ್‌ ವಾಕ್ಯದ ಕನ್ನಡ ಅರ್ಥ

ಮಡಿಕೇರಿ: ʼತುರ್ತಾಗಿ ಒಂದು ಅಪಘಾತ ಮಾಡಿʼ ಸೂಚನಾ ಫಲಕ ವೈರಲ್ Read More »

ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ. ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷವಾದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌

ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು Read More »

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಅವಘಡ ಪ್ರಕರಣ| ಬಿಹಾರ ಮೂಲದ ಓರ್ವ ಸಾವು, ಮತ್ತೊಬ್ಬ ಗಂಭೀರ| ಮ.ನ ಪಾಲಿಕೆಯಿಂದ ನಗರದಾದ್ಯಂತ ಕಾಮಗಾರಿ ನಿಷೇಧಿಸಿ ಆದೇಶ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ತಳಪಾಯಕ್ಕೆ ತೆಗೆದ ಗುಂಡಿಯ ಪಕ್ಕದ ಮಣ್ಣು ಬುಧವಾರ ಮಧ್ಯಾಹ್ನ ಕುಸಿದು, ಕಾರ್ಮಿಕರಿಬ್ಬರು ಅದರಡಿ ಸಿಲುಕಿದ್ದರು.‌ ಅವರಲ್ಲಿ ಒಬ್ಬ ಕಾರ್ಮಿಕನನ್ನು ರಕ್ಷಿಸಲಾಗಿದೆ. ಇನ್ನೊಬ್ಬನ ರಕ್ಷಣಾ ಕಾರ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌), ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಏಳು ಗಂಟೆಗಳ ಪ್ರಯತ್ನದ ಬಳಿಕ ಇನ್ನೊಬ್ಬ ಕಾರ್ಮಿಕನ ದೇಹವನ್ನು ಮಣ್ಣಿನಡಿಯಿಂದ ರಾತ್ರಿ 7.30ರ ಸುಮಾರಿಗೆ ಹೊರತೆಗೆಯಲಾಯಿತು. ಬಿಹಾರದ ರೋಹ್ಟಾಸ್‌ ಜಿಲ್ಲೆಯ

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಅವಘಡ ಪ್ರಕರಣ| ಬಿಹಾರ ಮೂಲದ ಓರ್ವ ಸಾವು, ಮತ್ತೊಬ್ಬ ಗಂಭೀರ| ಮ.ನ ಪಾಲಿಕೆಯಿಂದ ನಗರದಾದ್ಯಂತ ಕಾಮಗಾರಿ ನಿಷೇಧಿಸಿ ಆದೇಶ Read More »

ಬೆಳ್ತಂಗಡಿ:‌ಮುಂಗಾರು ಮಳೆಯಬ್ಬರ ಹಿನ್ನೆಲೆ| ಗಡಾಯಿಕಲ್ಲು ಸೇರಿ ಹಲವು ಪ್ರವಾಸಿತಾಣ, ಜಲಪಾತ ವೀಕ್ಷಣೆಗೆ ನಿರ್ಬಂಧ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು ಜಲಪಾತಗಳ ವೀಕ್ಷಣೆಗೆ ಹೆಚ್ಚಿನ ಪ್ರವಾಸಿಗರು ಬರುವ ಸಾಧ್ಯತೆ ಇದ್ದು ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ಜಲಪಾತಗಳಿಗೆ ಹಾಗೂ ನರಸಿಂಹಗಡ (ಗಡಾಯಿಕಲ್ಲು) ಗೆ ಪ್ರವೇಶ ನಿರ್ಬಂಧಿಸಿ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ, ಕುದುರೆಮುಖ, ಸೋಮೇಶ್ವರ, ಆಗುಂಬೆ, ಸಿದ್ದಾಪುರ, ಕೊಲ್ಲೂರು ಕೆರೆಕಟ್ಟೆ ಮತ್ತು ಕಾರ್ಕಳ ಈ ವನ್ಯಜೀವಿ ವಲಯಗಳ ಅರಣ್ಯ ಪ್ರದೇಶಗಳಲ್ಲಿ ಬರುವ ಅರಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಡು ಮನೆ,

ಬೆಳ್ತಂಗಡಿ:‌ಮುಂಗಾರು ಮಳೆಯಬ್ಬರ ಹಿನ್ನೆಲೆ| ಗಡಾಯಿಕಲ್ಲು ಸೇರಿ ಹಲವು ಪ್ರವಾಸಿತಾಣ, ಜಲಪಾತ ವೀಕ್ಷಣೆಗೆ ನಿರ್ಬಂಧ Read More »