July 2024

ಮುಂದುವರಿದ ವರುಣಾರ್ಭಟ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಮಳೆ ಮುಂದುವರಿದಿದ್ದು ಹಲವು ಅನಾಹುತಗಳು ಸೃಷ್ಟಿಯಾಗುತ್ತಿವೆ. ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.27ರಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು‌ ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ‌ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ,‌ ಎನ್.ಆರ್. ಪುರ, ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿಪೂರ್ವ, ಪದವಿ ಕಾಲೇಜುಗಳಿಗೆ ಜು.27ರಂದು ರಜೆ ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ. […]

ಮುಂದುವರಿದ ವರುಣಾರ್ಭಟ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ನಾಳೆ(ಜು.27) ಕೊಡಗು ಜಿಲ್ಲೆಯ ಎರಡು‌ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 27ರಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ‌ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ನಾಳೆ(ಜು.27) ಕೊಡಗು ಜಿಲ್ಲೆಯ ಎರಡು‌ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್ ಗೋಯಲ್ ಅವರ ಪತ್ನಿಯೂ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ Read More »

ವಾರ ಕಳೆದರೂ ತಗ್ಗದ ಕುಮಾರಧಾರ, ನೇತ್ರಾವತಿ| ಧರ್ಮಸ್ಥಳ, ಕುಕ್ಕೆಯಲ್ಲಿ ಮುಳುಗಡೆ ಸ್ಥಿತಿಯಲ್ಲೇ ಇರುವ ಸ್ನಾನಘಟ್ಟ

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಕೊಂಚ ವಿರಾಮ ನೀಡಿದ್ದರೂ ಘಟ್ಟ ಪ್ರದೇಶಗಳಲ್ಲಿ ಮಳೆ‌ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಯಾವುದೇ ಇಳಿಕೆಯಾಗಿಲ್ಲ. ಬಂಟ್ವಾಳ ತಾಲೂಕಿನ ಕೆಲವೊಂದು ತಗ್ಗು ಪ್ರದೇಶ ನದಿ ನೀರಿನಿಂದ ಜಲಾವೃತಗೊಂಡಿದೆ. ನೆರೆಯ ಭೀತಿಯ ಹಿನ್ನೆಲೆ ಸ್ಥಳೀಯ ನಿವಾಸಿಗಳನ್ನು ಕೂಡ ಸ್ಥಳಾಂತರಿಸಲಾಗಿದೆ . ಈ ಬಾರಿಯ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಹಲವು ಸಾವುನೋವು ಸಂಭವಿಸಿದೆ. ಕರಾವಳಿಯಲ್ಲಿ ಮಳೆ ಆಗುತ್ತಿಲ್ಲವಾದ್ರೂ

ವಾರ ಕಳೆದರೂ ತಗ್ಗದ ಕುಮಾರಧಾರ, ನೇತ್ರಾವತಿ| ಧರ್ಮಸ್ಥಳ, ಕುಕ್ಕೆಯಲ್ಲಿ ಮುಳುಗಡೆ ಸ್ಥಿತಿಯಲ್ಲೇ ಇರುವ ಸ್ನಾನಘಟ್ಟ Read More »

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ| ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ| ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು Read More »

ಮಂಗಳೂರಿನಲ್ಲಿ ಬೀಸಿದ ಭಾರೀ ಬಿರುಗಾಳಿ| ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿ, ಶಿಕ್ಷಕಿಗೆ ಗಾಯ

ಸಮಗ್ರ ನ್ಯೂಸ್: ಶುಕ್ರವಾರ ಮಧ್ಯಾಹ್ನ ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಬೀಸಿದ ಬಿರುಗಾಳಿ ಮಳೆ ಅವಾಂತರ ಸೃಷ್ಟಿಸಿದೆ. ಶಾಲೆ, ಮನೆಯ ಮೇಲ್ಛಾವಣಿ ಕುಸಿದು, ಹಲವಾರು ವಿದ್ಯುತ್ ಕಂಬ ಧರಾಶಾಹಿಯಾಗಿರುವ ಘಟನೆ ಸುರತ್ಕಲ್ ನ ಕೃಷ್ಣಪುರದಲ್ಲಿ ನಡೆದಿದೆ. ಕೃಷ್ಣಪುರ ಕಾರುಣ್ಯ ವಿದ್ಯಾಲಯದ ಮೇಲ್ಛಾವಣಿ ಕುಸಿದು ಬಿದ್ದು ವಿದ್ಯಾರ್ಥಿ ಹಾಗೂ ಶಿಕ್ಷಕಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬಡಾವಣೆಗೆ ಸಂಪರ್ಕವಿರುವ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ವಿದ್ಯುತ್ ತಂತಿಗಳು ತುಂಡಾಗಿವೆ. ಪಕ್ಕದ ಮನೆಯ ಶೀಟ್ ಹಾರಿ ಬಂದು ಇನ್ನೊಂದು

ಮಂಗಳೂರಿನಲ್ಲಿ ಬೀಸಿದ ಭಾರೀ ಬಿರುಗಾಳಿ| ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿ, ಶಿಕ್ಷಕಿಗೆ ಗಾಯ Read More »

ಬೀದಿ ನಾಯಿಗಳಿಗೆ ಆಹಾರ/ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಸಮಗ್ರ ನ್ಯೂಸ್‌: ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸಲಹೆ, ಕರ್ನಾಟಕ ಸಾಕುಪ್ರಾಣಿಗಳ ಸುತ್ತೋಲೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ಆಧರಿಸಿ ಬೀದಿ ನಾಯಿಗಳಿಗೆ ಅಥವಾ ಬೆಕ್ಕುಗಳಿಗೆ ಆಹಾರ ನೀಡಲು ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ. ನಾಯಿ, ಬೆಕ್ಕುಗಳಿಗೆ ಆಹಾರ ನೀಡುವಾಗ ಅಂತರವನ್ನು ಕಾಪಾಡಿಕೊಳ್ಳಬೇಕು. ನಾಯಿ, ಬೆಕ್ಕುಗಳು ಆಹಾರಕ್ಕಾಗಿ ಆಕ್ರಮಣ ಮಾಡದಂತೆ ನೋಡಿಕೊಳ್ಳಲು ಸಾಧ್ಯವಾದರೆ ಮಾತ್ರ ಸಾರ್ವಜನಿಕರು ಅವುಗಳಿಗೆ ಆಹಾರ ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದೆ. ರಾತ್ರಿ 11.30ರ ನಂತರ, ಬೆಳಿಗ್ಗೆ 5ರ ಮೊದಲು ಆಹಾರ

ಬೀದಿ ನಾಯಿಗಳಿಗೆ ಆಹಾರ/ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ Read More »

ಬಂಟ್ವಾಳ: ತೀವ್ರ ಜ್ವರದ ಕಾರಣ ಉಸಿರು ಚೆಲ್ಲಿದ ಯುವಕ

ಸಮಗ್ರ ನ್ಯೂಸ್: ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಎಂದು ಗುರುತಿಸಲಾಗಿದೆ. ಯುವಕ ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವಾರದ ಹಿಂದೆ ಜ್ವರ ಬಂದಿತ್ತು. ಈ ಹಿನ್ನಲೆ ಚಿಕಿತ್ಸೆ ಪಡೆಯುತ್ತಿದ್ದ ಆತನಿಗೆ ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ

ಬಂಟ್ವಾಳ: ತೀವ್ರ ಜ್ವರದ ಕಾರಣ ಉಸಿರು ಚೆಲ್ಲಿದ ಯುವಕ Read More »

ದೇವರ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಆಪ್ತರ ಜೊತೆ ತೆರಳಿ ಪ್ರಾರ್ಥನೆ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಇದೀಗ ಜೈಲಿನಲ್ಲಿ ಇದ್ದು ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಜಾಮೀನು ಕೊಡಿಸಲು ಕುಟುಂಬದವರು ಕಷ್ಟಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಈ ನಡುವೆ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ. ನಿನ್ನೆ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ

ದೇವರ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಆಪ್ತರ ಜೊತೆ ತೆರಳಿ ಪ್ರಾರ್ಥನೆ Read More »

18ನೇ ಇಂಡಿಯನ್ ಪ್ರೀಮಿಯರ್ ಲೀಗ್‌/ ವಿಶೇಷ ಮನವಿ ಮಾಡಿದ ಫ್ರಾಂಚೈಸಿಗಳು

ಸಮಗ್ರ ನ್ಯೂಸ್‌: ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಗಾಗಿ ಈ ಬಾರಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಎಲ್ಲಾ ತಂಡಗಳಿಗೂ ರಿಟೇನ್ ಆಟಗಾರರನ್ನು ಬಿಟ್ಟು ಉಳಿದ ಆಟಗಾರರನ್ನು ಬಿಡುಗಡೆಗೊಳಿಸುವಂತೆ ಸೂಚನೆ ನೀಡಲಾಗಿದೆ. ಈ ಬೆನ್ನಲ್ಲೇ ಐಪಿಎಲ್ ಫ್ರಾಂಚೈಸಿಗಳು ವಿಶೇಷ ಬೇಡಿಕೆಯನ್ನಿರಿಸಿವೆ. ಸದ್ಯ ಮೆಗಾ ಹರಾಜಿಗೂ ಮುನ್ನ ಕನಿಷ್ಠ 3 ರಿಂದ 5 ಆಟಗಾರರನ್ನು ಮಾತ್ರ ರಿಟೇನ್ ಮಾಡಿಕೊಳ್ಳಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ 8 ಆಟಗಾರರನ್ನು ರಿಟೇನ್ ಮಾಡಿಕೊಳ್ಳಲು ಅನುಮತಿ

18ನೇ ಇಂಡಿಯನ್ ಪ್ರೀಮಿಯರ್ ಲೀಗ್‌/ ವಿಶೇಷ ಮನವಿ ಮಾಡಿದ ಫ್ರಾಂಚೈಸಿಗಳು Read More »