Ad Widget .

ಸಿಎಂಗೆ ಮುಡಾ ಸಂಕಷ್ಟ: ಹಗರಣದ ಸಂಪೂರ್ಣ ವರದಿ ಕೇಳಿದ ರಾಜ್ಯಪಾಲ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಚಿಂತನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು ಮತ್ತೆ ಮುಡಾ ಹಗರಣ ಸಂಪೂರ್ಣ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಳಿದ್ದಾರೆ.

Ad Widget . Ad Widget .

ಈಗಾಗಲೇ ಸರ್ಕಾರಿಂದ ಒಂದು ಬಾರಿ ವರದಿ ಪಡೆದುಕೊಂಡಿರುವ ರಾಜ್ಯಪಾಲರು ಇದೀಗ ನವದೆಹಲಿಯಲ್ಲಿ ಇದ್ದುಕೊಂಡೇ ಮತ್ತೊಮ್ಮೆ ವರದಿ ಕೇಳಿರುವುದು ಸಂಚಲನ ಮೂಡಿಸಿದೆ. ಈ ಹಿಂದೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಆದ್ರೆ, ಇದೀಗ ಖಾಸಗಿ ದೂರಿನ ಅನ್ವಯ ಮತ್ತೆ ವರದಿ ಕೇಳಿದ್ದಾರೆ. ಹೀಗಾಗಿ ನೂತನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರು ಹೆಚ್ಚಿನ ಮಾಹಿತಿ ನೀಡಲು ವರದಿ ಸಿದ್ಧಪಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *