Ad Widget .

ಪುನೀತ್ ಕೆರೆಹಳ್ಳಿ ಪರವಾಗಿ ಪೋಲಿಸ್ ಠಾಣೆಗೆ ತೆರಳಿದ ಪ್ರತಾಪ್ ಸಿಂಹ ವಿರುದ್ಧವೂ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ನಾಯಿ ಮಾಂಸ ವಿಚಾರವಾಗಿ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಇದರಲ್ಲಿ ಪಾಲ್ಗೊಂಡಿದ್ದರು. ಇದೀಗ ಇವರೆಲ್ಲರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎ1 ಪುನೀತ್ ಕೆರೆಹಳ್ಳಿ , ಎ2 ಪ್ರತಾಪ್ ಸಿಂಹ ಎಂದು ಉಲ್ಲೇಖಿಸಲಾಗಿದೆ. ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ.

Ad Widget . Ad Widget .

ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಜೈಪುರದಿಂದ ಬಂದಿದ್ದ ಲೋಡ್ಗಟ್ಟಲೇ ಬಾಕ್ಸ್ಗಳಲ್ಲಿ ನಾಯಿ ಮಾಂಸ ಇದೆ ಎಂದು ಪುನೀತ್ ಕೆರೆಹಳ್ಳಿ ತಂಡ ದಾಳಿ ಮಾಡಿತ್ತು. ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನೂ ಮಿಕ್ಸ್ ಮಾಡಿದ್ದಾರೆ ಎಂದು ಆರೋಪಿಸಿ, ಹೈಡ್ರಾಮಾ ಮಾಡಿದ್ದರು. ಈ ಹಿನ್ನಲೆ ರಸ್ತೆಯಲ್ಲಿ ಗಲಾಟೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ 2ಕೇಸ್ ಹಾಕಿ ಅರೆಸ್ಟ್ ಮಾಡಿದ್ದರು.

Ad Widget . Ad Widget .

Leave a Comment

Your email address will not be published. Required fields are marked *