ಸಮಗ್ರ ನ್ಯೂಸ್: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಸ್ವಪ್ನಿಲ್ ಕುಶಾಲೆ ಕಂಚಿನ ಪದಕ ಬೇಟೆಯಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಫೈನಲ್‌ನಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ ಸ್ವಪ್ನಿಲ್ ಕುಶಲೆ ಮತ್ತು ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರಿಬ್ಬರಲ್ಲಿಯೂ ಕೆಲವು ಸಾಮ್ಯತೆಗಳಿವೆ. ಸ್ವಪ್ನಿಲ್ ಅವರೂ ಧೋನಿಯಂತೆಯೇ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರಿಕೆಟಿಗನಾಗುವ ಗುರಿಯೊಂದಿಗೆ ಧೋನಿ ನೌಕರಿ ತ್ಯಜಿಸಿದರು. ಧೋನಿಯವರ ಬಯೋಪಿಕ್ ಅನ್ನು ಪದೇ ಪದೇ ವೀಕ್ಷಿಸಿದ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ಗೆ ಸಮರ್ಪಿಸಿಕೊಂಡಿದ್ದರು.