ಸಮಗ್ರ ನ್ಯೂಸ್: ಭಾರೀ ಮಳೆ ಮುಂದುವರೆದಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. ೨ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಆಗಸ್ಟ್ 2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.