ಉಪ್ಪಿನಂಗಡಿ: ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿ

ಸಮಗ್ರ ನ್ಯೂಸ್: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ.

Ad Widget ... ..

ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ ಈತ ಕಾಲೇಜಿಗೆಂದು ಬೆಳಿಗ್ಗೆ ತನ್ನ ಗೆಳೆಯರೊಂದಿಗೆ ಹೊರಟು ಬಂದಿದ್ದ ಎಂದು ತಿಳಿದುಬಂದಿದೆ.

Ad Widget

ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ಈತ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದ್ದು ಜೊತೆಗಿದ್ದ ಸ್ನೇಹಿತರು ಈತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *