Ad Widget .

ಯಾದಗಿರಿ ಪಿಎಸ್ಐ ಅನುಮಾನಸ್ಪದ ಸಾವು: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಯಾದಗಿರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪಿಎಸ್ಐ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಆದರೆ ಈ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ.

Ad Widget . Ad Widget .

ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್ಗಾಗಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್ ಅವರನ್ನು ಮತ್ತೆ ಯಾದಗಿರಿ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು. ಪಿಎಸ್ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು. ಪಿಎಸ್ಐ ಪರಶುರಾಮ್ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್ನಲ್ಲಿ ಮಾತನಾಡಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

Ad Widget . Ad Widget .

ಪರಶುರಾಮ ಸಾವಿಗೆ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಪದೇ ಪದೇ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ನಾವು ದಲಿತರು, ದುಡ್ಡು ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕರು ಪೋಸ್ಟಿಂಗ್ ಕೊಟ್ಟಿಲ್ಲ ಎಂದು ಶ್ವೇತಾ ದೂರು ನೀಡಿದ್ದಾರೆ.

ಇನ್ನೂ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ದೂರು ಆಧರಿಸಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಎ1 ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್, ಎ2 ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಪುತ್ರ ಪಂಪನಗೌಡ ಆಗಿದ್ದಾರೆ.

ಇದೀಗ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್ ಅನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Leave a Comment

Your email address will not be published. Required fields are marked *