Ad Widget .

ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಕಡಿದು ನರ್ತಿಸಿದ ಪತಿ| ವಿಕೃತಿ ಮೆರೆದಾತನ ಬಂಧಿಸಲು ಅಶ್ರುವಾಯು ಸಿಡಿಸಿದ ಪೊಲೀಸರು

ಸಮಗ್ರ ನ್ಯೂಸ್: ಪತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಕುತ್ತಿಗೆಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಸದ್ಯ ಗಂಭೀರ ಗಾಯಗೊಂಡಿರುವ ಪತ್ನಿಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಮಾರಣಾಂತಿಕವಾಗಿ ಹಲ್ಲೆಗೊಳಗಾದವರನ್ನು ಅನಿತಾ (38) ಎಂದು ಗುರುತಿಸಲಾಗಿದೆ. ಅವರ ಪತಿ, ಆರೋಪಿ ಲಕ್ಷ್ಮಣ ಯಾನೆ ರಮೇಶ್‌ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಸೊರಬ ತಾಲೂಕು ಮೂಲದ ಲಕ್ಷ್ಮಣ ಮತ್ತು ಅನಿತಾ ದಂಪತಿ ನಾಲ್ಕು ತಿಂಗಳ ಹಿಂದೆಯಷ್ಟೆ ಉಡುಪಿ ಜಿಲ್ಲೆಗೆ ಆಗಮಿಸಿದ್ದರು. ಕಾಶಿಮಠದ ತೋಟ ನೋಡಿಕೊಳ್ಳಲು ಇಲ್ಲಿಗೆ ಬಂದಿದ್ದ ಇವರು ಬಸ್ರೂರು ಕಾಶಿ ಮಠ ಸಂಬಂಧಿಸಿದ ರೆಸಿಡೆನ್ಶಿಯಲ್ ಬ್ಲಾಕ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ ರಾತ್ರಿ ಕುಡಿದ ಮತ್ತಿನಲ್ಲಿದ್ದ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದ.

ಮನೆಯ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಅನಿತಾ ಬಿದ್ದಿದ್ದರೂ ಲಕ್ಷ್ಮಣ ಮನೆಯ ಬಾಗಿಲ ಚಿಲಕ ಹಾಕಿ ಹಾಲ್‌ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ . ಘಟನೆ ಅರಿವಿಗೆ ಬರುತ್ತಲೇ ಸ್ಥಳೀಯರು ಕಿಟಕಿ ಒಡೆದು ಅಡುಗೆ ಕೋಣೆಗೆ ತೆರಳಿ ಅನಿತಾ ಅವರನ್ನು ರಕ್ಷಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಷ್ಟಾದರೂ ಲಕ್ಷ್ಮಣ ಮೈಮೇಲೆ ದೈವ ಬಂದವರಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಲೇ ಇದ್ದ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡಬೇಕಾಯಿತು. ಮನೆಯೊಳಗೆ ಅಶ್ರುವಾಯು ಪ್ರಯೋಗಿಸಿ ಸುಮಾರು‌ ಒಂದೂವರೆ ಗಂಟೆಯ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಾಗಿದ್ದು, ತನಿಖೆ ನಡೆಯುತ್ತಿದೆ.

Leave a Comment

Your email address will not be published. Required fields are marked *