ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್ ಕುಟುಂಬ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ಇಂದು ನಟ ಯಶ್ ಅವರು ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇದರ ಜೊತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

. Ad Widget . Ad Widget . Ad Widget .

ಯಶ್ ಅವರು ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಬಳಿಕ ಅವರು ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಇತ್ತ ಸುರ್ಯ ಶ್ರೀ ಸದಾಶಿವ ರುದ್ರ ದೇಗುಲಕ್ಕೂ ಯಶ್ ದಂಪತಿ ಮಕ್ಕಳ ಜೊತೆ ಭೇಟಿ ನೀಡಿ ಮಣ್ಣಿನ ಹರಕೆ ತೀರಿಸಿದ್ದಾರೆ. ಇವರ ಜೊತೆ ಟಾಕ್ಸಿಕ್ ಚಲನಚಿತ್ರದ ನಿರ್ದೇಶಕ ವೆಂಕಟ್ ಕೂಡ ದೇವರ ದರ್ಶನ ಪಡೆದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *