ಸಮಗ್ರ ನ್ಯೂಸ್: ದೇಶಾದ್ಯಂತ ಸುದ್ದಿ ಮಾಡಿದ್ದ 2012ರ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಮಹತ್ವದ ತೀರ್ಪನ್ನು ನ್ಯಾಯಾಲಯ ಮಂಗಳವಾರ (ಆ.6) ಪ್ರಕಟಿಸಿದೆ.
ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಆದೇಶ ಹೊರಡಿಸಿದ್ದಾರೆ.
2009ರ ಪಬ್ ದಾಳಿ ನಂತರ 2012ರಲ್ಲಿ ನಡೆದ ಹೋಂ ಸ್ಟೇ ದಾಳಿಯೂ ಬಾರಿ ಸುದ್ದಿಯಾಗಿತ್ತು. ಹುಟ್ಟುಹಬ್ಬ ಆಚರಿಸುತ್ತಿದ್ದ ವೇಳೆ ಈ ದಾಳಿ ನಡೆದಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲಾ ಆರೋಪಿಗಳು ದೋಷ ಮುಕ್ತಗೊಳಿಸಿದೆ.
ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದರು, ಪತ್ರಕರ್ತ ನವೀನ್ ಸೂರಿಂಜೆ ಪ್ರಕರಣ ನ್ಯಾಯಾಲಯ ಕೈಬಿಟ್ಟಿತ್ತು. ಇಂದು ಉಳಿದ 40 ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿತ್ತು.