Ad Widget .

ರಾಜಧಾನಿಯಲ್ಲಿ ಮದ್ಯ ಮಾರಾಟದ ಅವಧಿ ವಿಸ್ತರಣೆ/ ರಾತ್ರಿ 1 ಗಂಟೆವರೆಗೆ ಸಿಗುತ್ತೆ ಮದ್ಯ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಇನ್ಮುಂದೆ ಹೊಟೇಲ್‌, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ- ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೊಟೇಲ್‌ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ.

Ad Widget . Ad Widget .

ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗ‌ರ್ ಎನ್‌.ಕೆ. ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಈ ಆದೇಶದ ಪ್ರಕಾರ ಸಿಎಲ್ 4, ಸಿಎಲ್ 6, ಸಿಎಲ್ 7, ಸಿಎಲ್ 7D ಲೈಸೆನ್ಸ್ ಪಡೆದ ಹೊಟೇಲ್, ಕ್ಲಬ್, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್ 9 ಲೈಸೆನ್ಸ್‌ ಪಡೆದ ಬಾರ್‌ಗಳಿಗೆ ಬೆಳಗ್ಗೆ 10 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.

2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 269 ರಲ್ಲಿ ಘೋಷಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯಾರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜುಲೈ 06 ರಂದು ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಸಹಮತಿ ನೀಡಿದ ಹಿನ್ನೆಲೆ ವ್ಯಾಪಾರ- ವಹಿವಾಟು ವಿಸ್ತರಣೆಗೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *