ನೆಲಮಂಗಲದಲ್ಲಿ ಭೀಕರ ಅಪಘಾತ: ಪತಿ ಎದುರೇ ತುಂಬು ಗರ್ಭಿಣಿ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಟಿಪ್ಪರ್‌ ಲಾರಿಗೆ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟ ಘಟನೆ ನಡೆದಿದೆ.
ಘಟನೆಯಿಂದ ಹೊಟ್ಟೆಯಲ್ಲಿದ್ದ ಮಗು ಸಹಿತ ಹೊಟ್ಟೆಯಿಂದ ಹೊರಬಂದು ಸಾವಿಗೀಡಾಗಿದೆ. ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Ad Widget ... ..

ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್​ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಮರಳಿ ತಮ್ಮೂರು ತೋಟನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಆಗ ಸಿಂಚನಾ ಬೈಕ್​ನಿಂದ ಕೆಳೆಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ​ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ. ಮನಕಲಕುವ ಘಟನೆ ಕಂಡು ಸ್ಥಳೀಯರು ಕೂಡ ಕಣ್ಣೀರು ಹಾಕಿದ್ದಾರೆ

Ad Widget

ಈ ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *