ಹೊನ್ನಾವರ ಸಮುದ್ರದಲ್ಲಿ ಕೊಳೆತ ಶವ ಪತ್ತೆ| ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಡ್ರೈವರ್ ಅರ್ಜುನ್ ನ ಶವವೆಂಬ ಶಂಕೆ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವಲ್ಲೇ ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.

Ad Widget ... ..

ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ.

Ad Widget

ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್​ಎ ಪರೀಕ್ಷೆಗಾಗಿ ಅರ್ಜುನ್​ ಸಹೋದರ ಅಭಿಜಿತ್​​ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಜುಲೈ 16 ರಂದು ಸಂಭಿವಿಸಿದ್ದ ಗುಡ್ಡ ಭೂಕುಸಿತದಲ್ಲಿ ಕೇರಳದ ಕೋಝಿಕ್ಕೋಡ್ ಮೂಲದ ಲಾರಿ ಚಾಲಕ ಅರ್ಜುನ್ ನಾಪತ್ತೆಯಾಗಿದ್ದಾರೆ. ಅರ್ಜುನ್​ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಮೇರೆಗೆ ಹುಡುಕಾಟ ನಡೆಸಲಾಗಿತ್ತು. ಸತತ 13 ದಿನಗಳ ಕಾಲ ಹುಡುಕಾಟ ನಡೆಸಿದರೂ ಅರ್ಜುನ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಭೂಕುಸಿತದಿಂದ ನದಿಯಲ್ಲಿ ಶೇಖರಣೆಯಾದ ಮಣ್ಣಿನಡಿ ಹೂತು ಹೋಗಿದ್ದ ಲಾರಿಯೊಳಗೆ ಅರ್ಜುನ್ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಏತನ್ಮಧ್ಯೆ, ವಿವಿಧ ಸಾಧನಗಳನ್ನು ಬಳಸಿ ಶೋಧ ನಡೆಸಿದಾಗ ನದಿಪಾತ್ರದಲ್ಲಿ ಯಾವುದೇ ದೇಹ ಪತ್ತೆಯಾಗಿಲ್ಲ.

Leave a Comment

Your email address will not be published. Required fields are marked *