ಸಮಗ್ರ ನ್ಯೂಸ್: ಇಂದು ರಾಜ್ಯದೆಲ್ಲಡೆ ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ ಆದರೆ. ಇಲ್ಲಿ ಕಾಪುವಿನ ಮಲ್ಲಾರು ನಿವಾಸಿ ಗೋವರ್ಧನ್ ಭಟ್ ಜೀವಂತ ಹಾವಿಗೆ ತನು ಎರೆಯುವುದರ ಮೂಲಕ ನಾಗರಪಂಚಮಿಯನ್ನು ಬಹಳ ವೈಶಿಷ್ಟ್ಯದಿಂದ ಆಚರಿಸಿ ತಮ್ಮ ಇಷ್ಟಾರ್ಥ ನೆರೆವೇರಿಸುವಂತೆ ಪ್ರಾರ್ಥನೆ ಸಲ್ಲಿಸುತ್ತಾರೆ.
ಮಜೂರು ಮಲ್ಲಾರಿನ ಗೋವರ್ಧನ್ ಭಟ್ ಅವರು ಹಾವುಗಳ ರಕ್ಷಣೆ ಮಾಡುತ್ತಾರೆ. ಕಾಪು ಪರಿಸರದಲ್ಲಿ ಚಿರಪರಿಚಿತರು. ಈ ಪರಿಸರದಲ್ಲಿ ಎಲ್ಲೆ ಹಾವುಗಳೂ ಸಂಕಷ್ಟದಲ್ಲಿದ್ದರೆ ಗೋವರ್ಧರನ್ ನೆರೆವಿಗೆ ದಾವಿಸ್ತಾರೆ. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡಿ ಗುಣಮುಖಗೊಂಡ ನಂತರ ಕಾಡಿಗೆ ಬಿಡುವ ಮೂಲಕ ಹಲವು ಬಾರಿ ಉರಗ ಪ್ರೇಮ ಮೆರೆದಿದ್ದಾರೆ. ಈ ವರೆಗೆ 1೦೦೦ ಕ್ಕೂ ಅಧಿಕ ಹಾವುಗಳ ಆರೈಕೆ ಮಾಡಿದ್ದಾರೆ.
ತನ್ನ ಆರೈಕೆಯಲ್ಲಿ ಇರುವ ಹಾವುಗಳಿಗೆ ತನು ಏರೆಯುವ ಮೂಲಕ ನಾಗರ ಪಂಚಮಿಯನ್ನು ಆಚರಿಸುತ್ತಾರೆ.
ಎಲ್ಲಾ ಕಡೆ ನಾಗಕಲ್ಲಿಗೆ ಪೂಜೆ ಪುನಸ್ಕಾರಗಳು ನಡೆಯುತ್ತದೆ. ಆದರೆ ಪಂಚಮಿಯಂದು ನಮ್ಮ ಮನೆಯಲ್ಲಿ ನಮ್ಮ ಮನೆಯವರು ಒಟ್ಟಾಗಿ ಜೀವಂತ ನಾಗನಿಗೆ ಪೂಜೆ ಮಾಡುವುದು ನಮ್ಮೆಲ್ಲರ ಭಾಗ್ಯ ಎನ್ನುತ್ತಾರೆ ಗೋವರ್ದನ್ ಭಟ್