Ad Widget .

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತು: ಸತೀಶ್ ಜಾರಕಿಹೊಳಿಗೆ ಸಮನ್ಸ್

ಸಮಗ್ರ ನ್ಯೂಸ್: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಏನಿದು ಪ್ರಕರಣ?
2022ರ ನವೆಂಬರ್ ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಮಾನವ ಬಂದುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಸತೀಶ್ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಇದು ನಮ್ಮ ಪದವಲ್ಲ ಪರ್ಷಿಯನ್ನಿಂದ ಬಂದಿದ್ದು. ಭಾರಕ್ಕೂ ಪರ್ಷಿಯನ್ಗೂ ಏನು ಸಂಬಂಧ? ಎಂದು ಹೇಳಿದ್ದರು. ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ, ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಅವಹೇಳಕಾರಿ ಹೇಳಿಕೆ ನೀಡಿದ್ದರು.

Ad Widget . Ad Widget . Ad Widget .

ಇದೇ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಮಾತನ್ನು ಕಾಂಗ್ರೆಸ್ ನಾಯಕರೇ ಖಂಡಿಸಿದರು.

Leave a Comment

Your email address will not be published. Required fields are marked *