Ad Widget .

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ| 70 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದೆ. 62 ಪ್ರಯಾಣಿಕರು ಹಾಗೂ 8 ವಿಮಾನದ ಸಿಬ್ಬಂದಿ ಇದ್ದ ವಿಮಾನವು ಬ್ರೆಜಿಲ್‌ನ ಸಾವೋ ಪೌಲೋದಲ್ಲಿ ಪತನಗೊಂಡಿದ್ದು ಭೂಮಿಗೆ ಅಪ್ಪಳಿಸುತ್ತಲೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪತನಗೊಂಡ ಕೆಲವೇ ಸೆಕೆಂಡ್‌ಗಳಲ್ಲಿ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ. ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲ 70 ಜನರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

Ad Widget . Ad Widget .

ಕಾಸ್ಕಾವೆಲ್‌ನಿಂದ ಗುವಾರುಲ್ಹೋಸ್‌ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ವೇಳೆ ಸಾವೋ ಪೌಲೋ ರಾಜ್ಯದ ವಿನ್ಹೇಡೋ ಎಂಬ ಪ್ರದೇಶದಲ್ಲಿ ವಿಮಾನವು ಪತನಗೊಂಡಿದೆ. ವಿಮಾನದ ಅವಶೇಷಗಳಿಂದ ಶವಗಳನ್ನು ಹೊರತೆಗೆಯಲಾಗುತ್ತಿದೆ. ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿಯು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶವಗಳನ್ನು ಸಾಗಿಸಲು ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Ad Widget . Ad Widget .

Leave a Comment

Your email address will not be published. Required fields are marked *