ಚಿಕ್ಕಮಗಳೂರು : ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ|ವ್ಯಕ್ತಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ವ್ಯಕ್ತಿ ಕಬ್ಬಿಣದ ಏಣಿನ್ನು ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆ.8 ರಂದು ನಡೆದಿದೆ.

Ad Widget ... ..

ಮೃತನನ್ನು 48 ವರ್ಷದ ಪ್ರಸನ್ನ ಸಾಲ್ಡನ್ ಎಂದು ಗುರುತಿಸಲಾಗಿದೆ. ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯನ್ನು ಮನೆಗೆ ತಂದಿದ್ದರು. ಕೆಲಸವಾದ ಬಳಿಕ ಏಣಿಯನ್ನು ಮತ್ತೆ ಕಾಫಿ ತೋಟಕ್ಕೆ ಇಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Ad Widget

ಕಬ್ಬಿಣದ ಏಣಿಯಾದ ಕಾರಣ ವಿದ್ಯುತ್ ಸ್ಪರ್ಶಿಸಿದ ಕೂಡಲೇ ಸಾಲ್ಡರ್ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಮಲೆನಾಡ ಭಾರೀ ಗಾಳಿ-ಮಳೆಗೆ ವಿದ್ಯುತ್ ತಂತಿಗಳು ಕೂಡ ಜಗ್ಗಿದ್ದವು. ಅತ್ಯಂತ ಕೆಳಭಾಗದಲ್ಲಿ ಇದ್ದ ವಿದ್ಯುತ್ ತಂತಿಗಳಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *