ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷ ಸದ್ಯೋದ್ಯಾನ ಲಾಲ್‌ಬಾಗ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಗುರುವಾರದಿಂದ ಆರಂಭವಾಗುತ್ತಿದೆ. ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.
ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ.
ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡು ಬದಿ, ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡು ಬದಿ, ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದ ವರೆಗೆ, ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ, ಬಿಟಿಎಸ್ ಬಸ್ ನಿಲ್ದಾಣ, ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡು ಬದಿಗಳಲ್ಲಿ ಕೃಂಬಿಗಲ್ ರಸ್ತೆಯ ಎರಡು ಕಡೆಗಳಲ್ಲಿ, ಲಾಲ್‌ಬಾಗ್ ವೆಸ್ಟೇಟ್‌ನಿಂದ ಆರ್.ವಿ. ಟೀರ್ಸ್ ಕಾಲೇಜ್‌ವರೆಗೆ, ಆರ್‌ವಿ ಟೀರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್ ವರೆಗೆ, ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ ಪಾರ್ಕಿಂಗ್ ಅವಕಾಶ ಇಲ್ಲ.