ಗುಡ್ಡ ಕುಸಿತದಿಂದ ತತ್ತರವಾದ ಕೇರಳದ ವಯನಾಡಿಗೆ ಇಂದು ಪ್ರಧಾನಿ ಮೋದಿ ಭೇಟಿ

ಸಮಗ್ರ ನ್ಯೂಸ್: ವಯನಾಡಿನಲ್ಲಿ ಭಯಾನಕ ಭೂಕುಸಿತದಿಂದ ನೂರಾರು ಜನ ಮೃತಪಟ್ಟು ಅಪಾರ ಸಾವು-ನೋವು ಸಂಭವಿಸಿದೆ. ಇಂದು ಕೇರಳದ ವಯನಾಡ್ ಜಿಲ್ಲೆಯ ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದಾರೆ.

Ad Widget ... ..

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಧ್ವಂಸಗೊಂಡ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಕುಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ, ಬೆಳಗ್ಗೆ 11.15 ರ ಸುಮಾರಿಗೆ ಕಣ್ಣೂರು ವಿಮಾನ ನಿಲ್ದಾಣದಿಂದ ವಯನಾಡ್‌ಗೆ ತೆರಳಿದರು. ಪ್ರಧಾನಮಂತ್ರಿಯವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು.

Ad Widget

ವೈಮಾನಿಕ ಸಮೀಕ್ಷೆಯ ನಂತರ ಅವರು ಇಲ್ಲಿನ ಕಲ್ಪೆಟ್ಟಾದಲ್ಲಿರುವ ಎಸ್‌ಕೆಎಂಜೆ ಹೈಯರ್ ಸೆಕೆಂಡರಿ ಶಾಲೆಗೆ ಬಂದಿಳಿದು ಅಲ್ಲಿಂದ ರಸ್ತೆ ಮಾರ್ಗವಾಗಿ ಕೆಲವು ಭೂಕುಸಿತ ಪೀಡಿತ ಪ್ರದೇಶಗಳಿಗೆ ಮೋದಿ ತೆರಳಿದ್ದಾರೆ. ಪರಿಹಾರ, ಪುನರ್ವಸತಿ ವಿಚಾರವಾಗಿ ಸಮಾಲೋಚನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *