ಹಾಸನ ರೈಲ್ವೆ ಹಳಿ ಮೇಲೆ ಮತ್ತೆ ಮಣ್ಣು ಕುಸಿತ… ರೈಲು ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಾಸನ-ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ. ವಾರಗಳ ಹಿಂದಷ್ಟೇ ಇಂತಹ ಅವಘಡ ಸಂಭವಿಸಿದೆ. ಈಗ ಮತ್ತೊಮ್ಮೆ ಮರಗಳ ಸಮೇತ ಭಾರೀ ಪ್ರಮಾಣದ ಮಣ್ಣು ಕುಸಿದಿದೆ.

Ad Widget ... ..

ಇದರಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್ ಮಾಡಲಾಗಿದೆ. ಆಲೂರು-ಹಾಸನ ಮಾರ್ಗದ ರೈಲು ಸಂಚಾರವೂ ಸ್ಥಗಿತಗೊಂಡಿದೆ. ಸಕಲೇಶಪುರ, ಯಡಕುಮಾರಿ, ಶಿರಿಬಾಗಿಲು, ಆಲೂರು ಸೇರಿ ಒಟ್ಟು ಆರು ಕಡೆ ರೈಲು ಸಂಚಾರ ನಿಂತಿದೆ. ರೈಲುಗಳು ದಿಢೀರ್ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡಿದರು.

Ad Widget

Leave a Comment

Your email address will not be published. Required fields are marked *