ಸಮಗ್ರ ನ್ಯೂಸ್: ನಾಲ್ಕು ಜಿಲ್ಲೆ ಮೂರು ರಾಜ್ಯಗಳಿಗೆ ಜೀವನಾಧಾರವಾದ ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ಮುರಿದು ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜನರು ಆತಂಕಕ್ಕೀಡಾಗಿದ್ದಾರೆ. ಇದರಿಂದ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ನ ಚೈನ್‌ಲಿಂಕ್ ಶನಿವಾರ (ಆ.10) ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ 105 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್ ನೀರನ್ನ ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದ್ರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನ ನೋಡೋದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಈಗಾಗಲೇ ಸಚಿವರು, ಶಾಸರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತುಂಗಾಭದ್ರ ಡ್ಯಾಂ ಬಳಿ ಆಗಮಿಸಿದ್ದು, ಗೇಟ್ ಕುಸಿದಿರುವುದನ್ನು ಪರಿಶೀಲನೆ ಮಾಡಿದರು. ಇನ್ನು ಇದೇ ವೇಳೆ ಮಾತನಾಡಿರುವ ಡಿಕೆ ಶಿವಕುಮಾರ್, ನದಿ ಪಾತ್ರದ ಜನರು ಆತಂಕವಾಗುವುದು ಬೇಡ. ಇನ್ನು ಬೆಳೆ ಬೆಳೆದ ರೈತರು ಸಹ ಯಾವುದೇ ಗಾಬರಿಯಾಗುವುದು ಬೇಡ ಎಂದು ಅಭಯ ನೀಡಿದ್ದಾರೆ.
ಇನ್ನೂ ನದಿಪಾತ್ರದ ಜನರು ಆತಂಕಕ್ಕೊಳಗಾಗಬಾರದು. ಜನರ ಸುರಕ್ಷಿತ ಗಾಗಿ ಈಗಾಗಲೇ ಕಳೆದ ರಾತ್ರಿಯಿಂದ ಮಾಹಿತಿ ನೀಡಲಾಗಿದೆ. ಜನರ ಸುರಕ್ಷಿತೆಗಾಗಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ ರಾತ್ರಿ ಹತ್ತು ಗೇಟ್ ಗಳಿಂದ ನೀರನ್ನು ಹೊರಬಿಡಲಾಗುತ್ತಿತ್ತು. ಆದ್ರೆ 19 ನೇ ಗೇಟ್ ನ ಚೈನ್ ಕಟ್ಟಾಗಿದೆ. ಗೇಟ್ ಹಾಕಬೇಕಾಗಿದ್ದರಿಂದ ನೀರನ್ನು ಹೊರಬಿಡಲಾಗುತ್ತಿದೆ. ರೈತರ ಒಂದು ಬೆಳೆಗಾದರೂ ನೀರು ನೀಡಲು ಕ್ರಮ ಕೈಗೊಳ್ಳುತ್ತೇವೆ. ರೈತರು ಗಾಬರಿ ಪಡುವುದು ಬೇಡ. ಮೂರು ಸರ್ಕಾರ ಗಳು ರೈತರಿಗೆ ಯಾವ ರೀತಿ ನ್ಯಾಯ ದೊರಕಿಸಿಕೊಡಬೇಕೋ ಅದನ್ನು ನೀಡುತ್ತೇವೆ ಎಂದಿದ್ದಾರೆ.