Ad Widget .

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್

ಸಮಗ್ರ ನ್ಯೂಸ್: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ರಾ.ಹೆ.66ರ ಪಕ್ಕದಲ್ಲಿರುವ ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ಮಧ್ಯರಾತ್ರಿ ವೇಳೆ ನಡೆದಿದೆ.

Ad Widget . Ad Widget .

ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿದ್ದ. ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

Ad Widget . Ad Widget .

2018ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಹತ್ಯೆ ನಡೆದಿತ್ತು. ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವೂದ್, ಶಮೀರ್, ರಿಯಾಝ್, ನಮೀರ್, ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಈ ಪ್ರಕರಣದ ಆರೋಪಿಗಳಾಗಿದ್ದರು ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವೂದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಸಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ.

Leave a Comment

Your email address will not be published. Required fields are marked *