ಭಾರೀ ಮಳೆ/ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್‌: ಭಾರೀ ಮಳೆ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಹಲ್ಲಾಮ್ ಮಾರ್ಗ ಮತ್ತು ಬಲ್ಟಾಲ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಈ ಕಾರಣದಿಂದ ಎರಡೂ ಕಡೆಗಳಲ್ಲಿ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಬುಧವಾರ ನಿರ್ವಹಣೆಗಾಗಿ ಪಹಲ್ಲಾಮ್ ಮಾರ್ಗವನ್ನು ಮುಚ್ಚಲಾಗಿತ್ತು.

Ad Widget ... ..

ಅಮರನಾಥ ಯಾತ್ರೆಯ ಪಹಲ್ಲಾಮ್ ಮತ್ತು ಬಾಲ್ ಮಾರ್ಗಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಬಿದುರಿ ಹೇಳಿದ್ದಾರೆ. ಮಳೆಯ ಕಾರಣ ಅಮರನಾಥ ಯಾತ್ರೆಯ ಬಾಲ್ಟಾಲ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕಿದೆ.

Ad Widget

ಯಾತ್ರಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಬಾಲ್ಟಾಲ್ ಮಾರ್ಗದ ಮೂಲಕ ಯಾತ್ರೆಯ ಪ್ರವೇಶ ಮತ್ತು ನಿರ್ಗಮನವನ್ನು ಅನುಮತಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *