Ad Widget .

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ‌ರೆಡ್ಡಿ‌ ನೇಮಕ

ಸಮಗ್ರ ನ್ಯೂಸ್: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ, ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ.

Ad Widget . Ad Widget .

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸದ್ಯ ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು. ಕರ್ನಾಟಕದ, ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿ ಪತ್ರಿಕಾ ಪ್ರಕಟಣೆ ನೀಡಿದೆ.

Ad Widget . Ad Widget .

ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂ.‌ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ, ತೇಜಸ್ವಿ ಸೂರ್ಯ ವಿರುದ್ಧ ಪರಾಜಿತಗೊಂಡಿದ್ದರು.

41 ವರ್ಷದ ಸೌಮ್ಯ ರೆಡ್ಡಿ ಬೆಂಗಳೂರಿನ ಆರ್‌.ವಿ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಅಧ್ಯಯನ ಪೂರ್ಣಗೊಳಿಸಿ, ನ್ಯೂಯಾರ್ಕ್‌ನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್ ಅಧ್ಯಯನವನ್ನು ಪೂರ್ಣಗೊಳಿಸಿದ್ದಾರೆ.

Leave a Comment

Your email address will not be published. Required fields are marked *