ಸಮಗ್ರ ನ್ಯೂಸ್: ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವ ಅವರಿಗೆ ಈಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಇಂದು (ಆ.14) ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು, ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಿಸಿ ಆದೇಶಿಸಿದೆ.