ಸಮಗ್ರ ನ್ಯೂಸ್: ಉತ್ತರ ಪ್ರದೇಶದಲ್ಲಿ ಸಬರಮತಿ ಎಕ್ಸ್‌ಪ್ರೆಸ್ (ವಾರಾಣಸಿ-ಅಹಮದಾಬಾದ್) ರೈಲಿನ 22 ಬೋಗಿಗಳು ಹಳಿ ತಪ್ಪಿ, ಅದೃಷ್ಟವಶಾತ್ ಪ್ರಾಣಹಾನಿಯಿಂದ ಪಾರಾದ ಘಟನೆ ಆ.17 ರಂದು ಸಂಭವಿಸಿದೆ.
ಕಾನ್ಪುರ್ ಮತ್ತು ಭೀಮಸೇನ್ ನಡುವೆ ಸಬರಮತಿ ಎಕ್ಸ್ಪ್ರೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೇ ಹಳಿ ಮೇಲೆ ಮೆಮೊ ರೈಲೊಂದು ಬರುತ್ತಿತ್ತು. ಅದೃಷ್ಟವಷಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಪ್ರಯಾಣಿಕರನ್ನು ಬಸ್ಸಿನ ಮೂಲಕ ಕಾನ್ಪುರ್ ರೈಲ್ವೆ ಸ್ಟೇಷನ್ ತಲುಪಿಸಿದ್ದೇವೆ ಎಂದು ಜಿಲ್ಲಾ ಮಾಜಿಸ್ಟ್ರೇಟ್ ರಾಕೇಶ್ ವರ್ಮಾ ತಿಳಿಸಿದ್ದಾರೆ.
ಸಬರಮತಿ ಎಕ್ಸ್‌ಪ್ರೆಸ್ (ವಾರಾಣಸಿ-ಅಹಮದಾಬಾದ್) ರೈಲು ಕಾನ್ಪುರ್ ಹತ್ತಿರ ನಸುಕಿನ 2:35 ಗಂಟೆ ಸುಮಾರಿಗೆ ಹಳಿ ತಪ್ಪಿದೆ. ಎಂಜಿನ್ ಹೀಟ್ ಆಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಐಬಿ ಮತ್ತು ಯುಪಿ ಪೊಲೀಸರು ಪರೀಶಿಲನೆ ಮಾಡುತ್ತಿದ್ದಾರೆ. ಯಾವುದೇ ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಸಮಸ್ಯೆಯಾಗಿಲ್ಲ. ಪ್ರಯಾಣಿಕರಿಗೆ ಮತ್ತೊಂದು ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಯಾಣಿಕರನ್ನು ಘಟನೆ ನಡೆದ ಸ್ಥಳದಿಂದ ಕಾನ್ಪುರ್‌ವರೆಗೆ ಬಸ್ಸಿನಲ್ಲಿ ಕರೆದೊಯ್ಯಲಾಗಿದೆ. ಕಾನ್ಪುರದಿಂದ ಮತ್ತೊಂದು ರೈಲಿನ ವ್ಯವಸ್ಥೆ ಮಾಡಲಾಗಿದ್ದು. ಅಹಮದಾಬಾದ್ ವರೆಗೆ ತಲುಪಿಸುತ್ತೇವೆ ಎಂದು ಝಾನ್ಸಿ ವಿಭಾಗದ ರೈಲ್ವೆ ಅಧಿಕಾರಿ ದೀಪಕ್ ಕುಮಾರ್ ಮಾಹಿತಿ ನೀಡಿದ್ದಾರೆ.