ಉಡುಪಿ: ಕಾರಿನಲ್ಲಿ ಎಸಿ ಹಾಕಿ ಮಲಗಿದ್ದಾತ ಉಸಿರುಗಟ್ಟಿ ಸಾವು

ಸಮಗ್ರ ನ್ಯೂಸ್: ಅಣ್ಣನ ಸ್ನೇಹಿತನೊಂದಿಗೆ ತನ್ನ ತಂದೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ರಾತ್ರಿ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಸಾವನ್ನಪ್ಪಿದ ಘಟನೆ ಆ.16 ರಂದು ನಡೆದಿದೆ .

Ad Widget ... ..

ಮೃತ ಗುರುರಾಜ್ (32) ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿಯಾಗಿದ್ದಾರೆ. ಗುರುರಾಜ್‌ ತನ್ನ ತಂದೆಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿ, ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಗ್ಲಾಸ್ ಮುಚ್ಚಿ ಎಸಿ ಹಾಕಿ ಮಲಗಿದ್ದರು.

Ad Widget

ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ವರದಿ ಬಳಿಕವಷ್ಟೇ ತಿಳಿಯಬೇಕಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *