Ad Widget .

ಭೀಕರ ರಸ್ತೆ ಅಪಘಾತ| 10 ಮಂದಿ ಸಾವು, 20 ಮಂದಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಬುಲಂದ್ಶಹರ್‌ನ ಸೆಲಾಂಪುರ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಖಾಸಗಿ ಬಸ್ ಮತ್ತು ಟೆಂಪೊ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿ ಸುಮಾರು 25 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಪಘಾತದಲ್ಲಿ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಅಪಘಾತದಿಂದ ಕುಪಿತರಾದ ಸ್ಥಳೀಯರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *